ETV Bharat / state

ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಕಾರಜೋಳ ಖಡಕ್ ಎಚ್ಚರಿಕೆ !

ಪ್ರಗತಿ ಪರಿಶೀಲನೆ ಸಭೆ ನಡೆದಿದ್ದು, ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಖಡಕ್ ಎಚ್ಚರಿಕೆ ನೀಡಿದ್ದಾರೆ.

Progress review meeting by DCM Karajola!
ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಕಾರಜೋಳ ಖಡಕ್ ಎಚ್ಚರಿಕೆ !
author img

By

Published : Feb 15, 2020, 2:25 PM IST

ಬೆಂಗಳೂರು : ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿಎಂ, ಮಾರ್ಚ್ ಅಂತ್ಯದೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಯಾವುದೇ ಅನುದಾನ ಲ್ಯಾಪ್ಸ್ ಆಗಬಾರದೆಂದು ಎಚ್ಚರಿಕೆ ನೀಡಿದ್ದಾರೆ.

ಜನವರಿ ಅಂತ್ಯಕ್ಕೆ 6,594 ಕೋಟಿ ರೂ. ಬಿಡುಗಡೆ ಮಾಡಿದ್ದು, ಅದರಲ್ಲಿ 4,675 ಕೋಟಿ ರೂ. ವೆಚ್ಚ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆ ಘಟಕಕ್ಕೆ 341ಕೋಟಿ ಬಿಡುಗಡೆ ಮಾಡಿದ್ದು, 317 ಕೋಟಿ ವೆಚ್ಚ ಮಾಡಲಾಗಿದೆ, ಕೆಆರ್​ಡಿಸಿಎಲ್​ಗೆ 300 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೇ.100 ರಷ್ಟು ವೆಚ್ಚ ಮಾಡಲಾಗಿದೆ. ರಾಜ್ಯ ಹೆದ್ದಾರಿ ಘಟಕದಲ್ಲಿ 333 ಕೋಟಿ ರೂ. ಬಿಡುಗಡೆಯಾಗಿದ್ದು, 333 ಕೋಟಿ ರೂ, ವೆಚ್ಚಮಾಡಲಾಗಿದೆ ಎಂದರು.

ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ವೇಗ ಮಿತಿ ಬೋರ್ಡ್​ಗಳನ್ನು ಅಳವಡಿಸಬೇಕು. ನೂತನ ರಸ್ತೆ ಕಾಮಗಾರಿಗಳ ನಿರ್ಮಿಸುವಾಗ ಕನಿಷ್ಠ ಪ್ರಮುಖ ಸ್ಥಳಗಳಲ್ಲಿ, ಶಾಲಾ ಕಾಲೇಜು, ಅಪಘಾತ ವಲಯಗಳ ಸ್ಥಳಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಬೇಕು. ಎಸ್​ಸಿಪಿ ಮತ್ತು ಟಿಎಸ್​ಪಿ ಯೋಜನೆ , ವಿಶೇಷ ಅಭಿವೃದ್ಧಿ ಯೋಜನೆಯಡಿ ಯಾವುದೇ ಅನುದಾನ ಉಳಿಕೆಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮುಖ್ಯ ಇಂಜಿನಿಯರ್​ಗಳು ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ನಿಯಮಿತವಾಗಿ ಸಭೆ ನಡೆಸಿ, ಸಮಗ್ರವಾಗಿ ಚರ್ಚಿಸಬೇಕು ಎಂದು ಹೇಳಿದರು.

ಮುಖ್ಯ ಇಂಜಿನಿಯರ್​ಗಳು ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿ ಪ್ರಗತಿ ಪರಿಶೀಲನೆ ನಡೆಸಬೇಕು. ಯಾವುದೇ ಲೋಪವಾದರೆ ಕಾರ್ಯನಿರ್ವಹಣೆ ವರದಿಯಲ್ಲಿ ನಮೂದಿಸಲಾಗುವುದು ಎಂದು ಸೂಚಿಸಿದರು. ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ಮುಖ್ಯ ಇಂಜಿನಿಯರ್​ಗಳು, ಅಧೀಕ್ಷಕ ಇಂಜಿನಿಯರ್​ಗಳು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.