ETV Bharat / state

ನೀರಾವರಿ ಯೋಜನೆ ಸಂಬಂಧ ಬಾಕಿ ಇರುವ ಅನುಮೋದನೆ ಪಡೆದುಕೊಳ್ಳುವಂತೆ ಸಚಿವ ಜಾರಕಿಹೊಳಿ ಸೂಚನೆ - Ramesh Jarakiholi led official meeting

ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ರಮೇಶ್​ ಜಾರಕಿಹೊಳಿ ಸೂಚಿಸಿದ್ದಾರೆ.

Progress Review Meeting of Irrigation Projects in Bengaluru
ಅರಣ್ಯ ಇಲಾಖೆಯ ಅನುಮೋದನೆ ಪಡೆಯಲು ಸಚಿವ ಜಾರಕಿಹೊಳಿ ಸೂಚನೆ
author img

By

Published : Nov 24, 2020, 8:18 PM IST

ಬೆಂಗಳೂರು: ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಸೂಚನೆ‌ ನೀಡಿದ್ದಾರೆ.

ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತೀರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಉನ್ನತಮಟ್ಟದ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಧಾದೇವಿ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್‌ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.