ಬೆಂಗಳೂರು: ಹಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನೇ 6 ರಿಂದ 8 ನೇ ತರಗತಿಯ ಪದವೀಧರ ಶಿಕ್ಷಕರ ನೇಮಕಾತಿಗೆ ಮುಂಬಡ್ತಿ ನೀಡಲು ರಾಜ್ಯ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಕರ್ನಾಟದಲ್ಲಿ ಹಾಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಪೈಕಿ ಶೇ.40ರಷ್ಟು ಶಿಕ್ಷಕರಿಗೆ ಮುಂಬಡ್ತಿ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ಶೇ. 40ರಷ್ಟು ಮಂದಿ 6 ರಿಂದ 8ನೇ ತರಗತಿ ಮಕ್ಕಳಿಗೆ ಪಾಠ ಮಾಡಲಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿ ಆದೇಶಿಸಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ಈ ಬಾರಿಯೂ ಇಲ್ಲ ಸೈಕಲ್ ಭಾಗ್ಯ
ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇದೊಂದು ಸಿಹಿ ಸುದ್ದಿಯಾಗಿದೆ. 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿಯ ನಿಯಮವನ್ನು ಮಾರ್ಪಡಿಸಲು ಸಹ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಅದರಂತೆ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿ ಶೇ. 60 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಸರ್ಕಾರ ಚಿಂತನೆ ನಡೆಸಿದೆ. ಇದು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ/ನೇಮಕಾತಿ) ನಿಯಮಗಳಡಿ ನಡೆಯಲಿದೆ ಎಂಬ ಮಾಹಿತಿ ಇದೆ.
ಉಳಿದ ಸ್ಥಾನಗಳ ಭರ್ತಿ: ಉಳಿದ ಶೇ. 40ರಷ್ಟು ಹುದ್ದೆಗಳು ಸೇವಾನಿರತ ಪ್ರಾಥಮಿಕ ಶಿಕ್ಷಕರ ಮುಂಬಡ್ತಿಯಿಂದ ಭರ್ತಿಯಾಗಲಿವೆ. 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ವೃಂದದ ನೇಮಕಾತಿ ನಿಯಮಗಳನ್ನು ಮಾರ್ಪಡಿಸಲು ಆರ್ಥಿಕ ಇಲಾಖೆ ಸಹಮತ ವ್ಯಕ್ತಪಡಿಸಿದೆ. ಅದರಂತೆ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ವೃಂದದ ನೇಮಕಾತಿ ಶೇ.60ರಷ್ಟು ನೇರ ನೇಮಕಾತಿಯಾದರೆ, ಶೇ. 40ರಷ್ಟು ಸೇವಾನಿರತ ಶಿಕ್ಷಕರಿಗೆ ಮುಂಬಡ್ತಿ ದೊರೆಯಲಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದೆ.