ETV Bharat / state

ಬಿಬಿಎಂಪಿ ವತಿಯಿಂದ ಅವೈಜ್ಞಾನಿಕ ಕಸ ವಿಲೇವಾರಿ ಆರೋಪ: ರೊಚ್ಚಿಗೆದ್ದ ಸಾರ್ವಜನಿಕರಿಂದ ಪ್ರತಿಭಟನೆ - ಶಾಸಕ ಅರವಿಂದ ಲಿಂಬಾವಳಿ

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ಕಸದ ಸಮಸ್ಯೆಯಿಂದ ಅಪಖ್ಯಾತಿಗೆ ಗುರಿಯಾಗಿದ್ದು, ಇದಕ್ಕೆ ಪರಿಹಾರ ಕಲ್ಪಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವುದು ಮತ್ತೊಮ್ಮೆ‌ ಗೋಚರವಾಗಿದೆ.

ಪ್ರತಿಭಟನೆ
author img

By

Published : Sep 19, 2019, 9:16 AM IST

ಬೆಂಗಳೂರು: ಮಹದೇವಪುರ ಕ್ಷೇತ್ರದ ಕಣ್ಣೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವ ಬಿಬಿಎಂಪಿ ವಿರುದ್ಧ ಸ್ಥಳೀಯರು ಕಸ ವಿಲೇವಾರಿ ಮಾಡುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಮಹದೇವಪುರ, ಕಣ್ಣೂರಿನ ಮಿಟಗಾನಹಳ್ಳಿಯಲ್ಲಿ ಬಿಬಿಎಂಪಿ ಕಸ ಸುರಿಯುತ್ತಿರುವುದನ್ನು ಖಂಡಿಸಿ ಕಣ್ಣೂರು ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯ ಹಾಳಾಗಿ ಹಲವು ರೋಗಗಳಿಗೆ ತುತ್ತಾಗುತ್ತಿರುವುದಾಗಿ ಸಾರ್ವಜನಿಕರು ಹೇಳುತ್ತಿದ್ದಾರೆ.

ಬಿಬಿಎಂಪಿ ವತಿಯಿಂದ ಅವೈಜ್ಞಾನಿಕ ಕಸ ವಿಲೇವಾರಿ ಆರೋಪ

ಸ್ಥಳಕ್ಕೆ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಬಿಎಂಪಿ ಸಹಾಯಕ ಆಯುಕ್ತ ರಣದೀಪ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

Intro:ಬೆಂಗಳೂರು: ಕಣ್ಣೂರು.

ಬಿಬಿಎಂಪಿ ವತಿಯಿಂದ ಅವೈಜ್ಞಾನಿಕ ಕಸ ವಿಲೇವಾರಿ, ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ.

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿಗೆ ಕಸದ ಸಮಸ್ಯೆಯಿಂದ ಅಪಖ್ಯಾತಿಗೆ ಗುರಿಯಾಗಿದ್ದು, ಇದಕ್ಕೆ ಪರಿಹಾರ ಕಲ್ಪಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವುದು ಮತ್ತೊಮ್ಮೆ‌ ಗೋಚರವಾಗಿದೆ.

ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವ ಬಿಬಿಎಂಪಿ ವಿರುದ್ಧ ಗ್ರಾಮಸ್ಥರು ಕಸ ವಿಲೇವಾರಿ ಮಾಡುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ ದೃಶ್ಯಗಳು ಕಂಡು ಬಂದದ್ದು ಮಹದೇವಪುರ ಕ್ಷೇತ್ರದ ಕಣ್ಣೂರು ಪಂಚಾಯಿತಿ ವ್ಯಾಪ್ತಿಯಲ್ಲಿ. ಹೌದು
ಮಹದೇವಪುರ, ಕಣ್ಣೂರಿನ ಮಿಟಗಾನಹಳ್ಳಿಯಲ್ಲಿ ಬಿಬಿಎಂಪಿ ಕಸ ಸುರಿಯುತ್ತಿರುವುದನ್ನು ಖಂಡಿಸಿ ಕಣ್ಣೂರು ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.Body:ಇಲ್ಲಿನ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯ ಹಾಳಾಗಿ ಹಲವು ರೋಗಗಳಿಗೆ ತುತ್ತಾಗುತ್ತಿವದ್ದಾರೆ. ಅಷ್ಟೇ ಅದಲ್ಲದೇ ಅಂತರ್ಜಲ ಕಲುಷಿತಗೊಂಡು ಕುಡಿಯುವ ನೀರು ಸಹ ಸಂಪೂರ್ಣ ಕಲುಷಿತಗೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು
ಮಿಟಗಾನಹಳ್ಳಿ ಕ್ವಾರಿಗೆ ಹೋಗುವ ಮಾರ್ಗವನ್ನು ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ‌ ಸ್ಥಾಳಕ್ಕೆ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಬಿಎಂಪಿ ಸಹಾಯಕ ಆಯುಕ್ತರ ರಣದೀಪ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

Conclusion:ಬಿಬಿಎಂಪಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವಲ್ಲಿ ವಿಫಲವಾಗಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುತ್ತಾ ಬಂದಿದ್ದು, ಇನ್ನಾದರು ಏಚ್ಚೇತ್ತುಕೊಂಡು ಕಸದ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಮುಕ್ತಿ ಕಲ್ಪಿಸುತ್ತಾರ ಎಂಬುದನ್ನು ಕಾದು ನೋಡಬೇಕಿದೆ.

ಬೈಟ್: ನಟರಾಜ್ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ.

ಬೈಟ್: ಅಶೋಕ್ , ಗ್ರಾಪಂ ಅಧ್ಯಕ್ಷರು

ಬೈಟ್: ಅರವಿಂದ ಲಿಂಬಾವಳಿ, ಶಾಸಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.