ಬೆಂಗಳೂರು: ಬಿಜೆಪಿ ಐಟಿ, ಇಡಿ ಹಾಗೂ ಸಿಬಿಐನಂತಹ ಸ್ವಾಯತ್ತ ತನಿಖಾ ಸಂಸ್ಥೆಗಳನ್ನ ಬಳಸಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುತ್ತಿದೆ. ಇದೇ ರೀತಿ ಮುಂದುವರೆದರೆ ವಿಧಾನಸೌಧವನ್ನು ಮುತ್ತಿಗೆ ಹಾಕುವುದಾಗಿ ದೇವನಹಳ್ಳಿ ಛಲವಾದಿ ಮಹಾಸಭಾ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ದೇವನಹಳ್ಳಿ ಪ್ರವಾಸಿ ಮಂದಿರದ ಬಳಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಚಿಕ್ಕಬಳ್ಳಾಪುರದ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಅವರು, ಕಳೆದ ಎರಡು ತಿಂಗಳಿನಿಂದ ಇಡಿ ಮೂಲಕ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ. ಈಗ ನಮ್ಮ ಜನಾಂಗದ ಪ್ರಬಲ ನಾಯಕ ಮಾಜಿ ಡಿಸಿಎಂ ಪರಮೇಶ್ವರ್ ಅವರ ಮೇಲೆ ಐಟಿ ದಾಳಿ ನಡೆಸಿ, ಹೆದರಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಕೆಪಿಸಿಸಿ ಎಸ್ಸಿ ವಿಭಾಗದ ಸಂಚಾಲಕ ಪ್ರಕಾಶ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.