ದೊಡ್ಡಬಳ್ಳಾಪುರ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್. ದೊರೆಸ್ವಾಮಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ಕಾರ್ಯಕರ್ತರು ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿದರು.