ETV Bharat / state

ಡಿಕೆಶಿ ಬಂಧನಕ್ಕೆ ಖಂಡನೆ: ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಕಾಂಗ್ರೆಸ್​ ಪ್ರತಿಭಟನೆ

author img

By

Published : Sep 5, 2019, 7:08 PM IST

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯಿಂದ ಏರ್​ಪೋರ್ಟ್​ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಕೃತಿ ದಹಿಸಿ ಪ್ರತಿಭಟನೆ

ಬೆಂಗಳೂರು: ನಗರದ ಏರ್​​ಪೋರ್ಟ್​ ರಸ್ತೆಯ ಸಾದನಹಳ್ಳಿ ಗೇಟ್ ಬಳಿ ಜಮಾಯಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ವಿರುದ್ದ ಧ್ವನಿ ಎತ್ತುವವರನ್ನು ಮಟ್ಟಹಾಕಲು ಬಿಜೆಪಿ ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಕಾನೂನಿಗೆ ಎಲ್ಲರೂ ತಲೆಬಾಗಬೇಕು. ಈ ನಿಟ್ಟಿನಲ್ಲಿ ನಮ್ಮ ನಾಯಕ ಇಡಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದರು. ಆದರೆ, ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದರು.

ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ

ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರ ಪತನನಗೊಳಿಸಲು ಆಪರೇಷನ್ ಕಮಲಕ್ಕೆ ಮುಂದಾದಾಗ ಡಿಕೆಶಿ ಬಂಡೆಯಂತೆ ನಿಂತಿದ್ದರು. ಹೀಗಾಗಿ ಇಡಿಯನ್ನು ಬಳಸಿಕೊಂಡು ಡಿಕೆಶಿಯವರನ್ನು ಬಂಧಿಸಿದೆ ಎಂದು ಪ್ರತಿಭಟನಾಕಾರರು ದೂರಿದರು. ಅಲ್ಲದೆ, ಡಿ ಕೆ ಶಿವಕುಮಾರ್ ಬಿಡುಗಡೆಯಾಗುವವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದ್ರು.

Intro:ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿವತಿಯಿಂದ ಏರ್ಪೋರ್ಟ್ ರಸ್ತೆಯಲ್ಲಿ
ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಏರ್ಪೋರ್ಟ್ ರಸ್ತೆಯ ಸಾದಹಳ್ಳಿ ಗೇಟ್ ಬಳಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ದ ವಿವಿಧ ಘೋಷಣೆಗಳನ್ನು ಕೂಗಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ ವಿರುದ್ದ ದ್ವನಿ ಎತ್ತುವವರನ್ನು ಮಟ್ಟಹಾಕಲು ಬಿಜೆಪಿ ಕೇಂದ್ರ ಸರ್ಕಾರದ ಸ್ವಾಯುತ್ತ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಕಾನೂನಿಗೆ ಎಲ್ಲರೂ ತಲೆಬಾಗಬೇಕು.ಈ ನಿಟ್ಟಿನಲ್ಲಿ ನಮ್ಮ ನಾಯಕ ಇ.ಡಿಯವರ ತನಿಖೆಗೆ ಸಹಕರಿಸಿದ್ದರು.ಆದರೆ, ಅವರಿಗೆ ಮಾನಸಿಕ ಕಿರುಕುಳ ನೀಡಿವುದರ ಜೊತೆಗೆ ತನ್ನ ವಶಕ್ಕೆ ಪಡೆದಿರುವುದು ಖಂಡನೀಯ.ಕಾನೂನನ್ನು ಕೈಗೊಂಬೆಯಾಗಿ ಮಾಡಿಕೊಂಡಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಕಿಡಿಕಾರಿದರು.

Body:2017ರಲ್ಲಿ ಗುಜರಾತ್ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಪ್ರಮುಖ ಪಾತ್ರ ವಹಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲು ಪಕ್ಷ ಸಂಘಟನೆ ಮಾಡಿದ್ದರು.ಬಿಜೆಪಿ ಸಮ್ಮಿಶ್ರ ಸರ್ಕಾರ ಪಥನಗೊಳಿಸಲು ಆಪರೇಷನ್ ಕಮಲ ಮಾಡಲು ಮುಂದಾದಾಗ ಡಿಕೆಶಿ ಬಂಡೆಯಂತೆ ನಿಂತಿದ್ದರು. ಹೀಗಾಗಿ ಇಡಿಯನ್ನು ಬಳಸಿಕೊಂಡಿರುವ ಬಿಜೆಪಿ ಡಿಕೆಶಿಯವರನ್ನು ಬಂಧಿಸಿದೆ ಎಂದು ದೂರಿದರು.ಬಿಡುಗಡೆಯಾಗುವವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದರು.

Conclusion:ಪ್ರತಿಭಟನೆಯಲ್ಲಿ ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಗೋಪಾಲಗೌಡ, ಮಾಜಿ ಜಿ.ಪಂ.ಸದಸ್ಯ ದಾನೇಗೌಡ, ಬೆಂಗಳೂರು ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ದೊಡ್ಡಜಾಲ ಗ್ರಾ.ಪಂ.ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್,ಕಾಂಗ್ರೆಸ್ ಮುಖಂಡ ಆಂಜನಪ್ಪ(ಪುಟ್ಟು), ಕೃಷಿಕ ಸಮಾಜ ಅಧ್ಯಕ್ಷ ಮಂಜುನಾಥ್ ಗೌಡ, ತಾ.ಪಂ.ಸದಸ್ಯರಾದ ನಾಗರಾಜ್, ಹಂಸವೇಣಿ ಸೇರಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಪಾಲ್ಗೊಂಡಿದ್ದರು.
****""""""""""""""""""''''''

ಬೈಟ್: ದಾನೇಗೌಡ ಗೌಡ, ಕಾಂಗ್ರೆಸ್ ಹಿರಿಯ ಮುಖಂಡ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.