ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಕರೆ ಕೊಡಲು ತೀರ್ಮಾನಿಸಿವೆ. ನಾಡಿದ್ದು ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರ ಸಭೆ ನಡೆಯಲ್ಲಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜೀನಾಮೆ ನೀಡಿ ಇಲ್ಲವೇ ಮರಾಠ ಪ್ರಾಧಿಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ತಡೆಗೆ ವಾಟಾಳ್ ನಾಗರಾಜ್ ಹಾಗೂ ಸಾ.ರ ಗೋವಿಂದ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಮುಂದಾಗಿದ್ದವು. ಸರ್ಕಲ್ ಮಧ್ಯ ಭಾಗದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸತ್ತೋದ್ನಪ್ಪ, ಸತ್ತೋದ್ನಪ್ಪ, ಯಡಿಯೂರಪ್ಪ ಸತ್ತೋದ್ದ ಅಂತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಾ.ರಾ ಗೊವಿಂದ್ ಮಾತನಾಡಿ, ಸರ್ಕಾರ ಕನ್ನಡಿಗರಿಗೆ ಮೋಸ ಮಾಡುತ್ತಿದೆ. ಮಾರಾಠಿಗರ ಪ್ರಾಧಿಕಾರಕ್ಕೆ 50 ಕೋಟಿ ರೂ. ಹಣ ನೀಡುತ್ತಿರುವುದು ಸರಿ ಇಲ್ಲ. ಕನ್ನಡ ನಾಡು ನುಡಿಯ ಉಳಿವಿಗಾಗಿ ಶ್ರಮಿಸದೆ ಮರಾಠಿಗರ ಒಳತಿಗಾಗಿ ಶ್ರಮಿಸುತ್ತಿರುವುದು ವಿಪರ್ಯಾಸ. ಇವೆಲ್ಲವು ರಾಜಕೀಯ ಪ್ರೇರಿತ ಎಂದು ತಿಳಿಸಿದರು.