ETV Bharat / state

ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಪ್ರತಿಭಟನೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದು ಪಡಿಸಿದ ಹೈಕೋರ್ಟ್ - ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ

ಪ್ರತಿಭಟನೆ ವೇಳೆ 'ಜಿಹಾದಿಗಳಿಗೆ ಧಿಕ್ಕಾರ, ಪಿಎಸ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್ ನೆಟ್ಟಾರ್ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್ ಮಾಡಬೇಕು' ಎಂದು ಘೋಷಣೆ ಕೂಗಲಾಗಿತ್ತು.

Chakravarthi Sulibele
ಚಕ್ರವರ್ತಿ ಸೂಲಿಬೆಲೆ
author img

By

Published : Jul 10, 2023, 10:43 PM IST

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪಿಎಸ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ ನಗರದ ಪುರಭವನದ ಮುಂದೆ ಪ್ರತಿಭಟಿಸಿದ ಆರೋಪ ಸಂಬಂಧ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನಗರದ ವಿಚಾರಣೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ.

ತಮ್ಮ ವಿರುದ್ಧ ಎಸ್.ಜೆ. ಪಾರ್ಕ್ ಠಾಣಾ ಇನ್ಸ್‌ಪೆಕ್ಟರ್ ನಗರದ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿರುವ ಖಾಸಗಿ ದೂರು ಮತ್ತು ನ್ಯಾಯಾಲಯ ಹೊರಡಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಚಕ್ರವರ್ತಿ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ನಗರದ ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ಇತರ ಭಾಗದಲ್ಲಿ ಪ್ರತಿಭಟನೆ ನಡೆಸಬಾರದು ಎಂಬುದಾಗಿ ರಾಜ್ಯಸರ್ಕಾರದ ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ನಗರದ ಪುರಭವನದ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಮಾಡಿ ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್.ಪಾರ್ಕ್ ಠಾಣೆಯ ಇನ್ಸ್‌ಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ಸಲ್ಲಿಸಿದ್ದಾರೆ.

ಆದರೆ, ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಎಸ್.ಜೆ.ಪಾರ್ಕ್​ ಠಾಣೆ ಇನ್ಸ್‌ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವುದು ಕಾನೂನು ಬಾಹಿರ. ಹೀಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದರು. ಅರುಣ್ ಶ್ಯಾಮ್ ಅವರ ವಾದವನ್ನು ಪರಿಗಣಿಸಿದ್ದ ನ್ಯಾಯಪೀಠ, ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಸಮನ್ಸ್‌ಗೆ ತಡೆಯಾಜ್ಞೆ ನೀಡಿದೆ.

ಪ್ರಕರಣದ ಹಿನ್ನೆಲೆ ಏನು?: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ 2022 ರ ಜುಲೈ 28ರಂದು ಜೆ.ಸಿ. ರಸ್ತೆಯ ಟೌನ್ ಹಾಲ್ ಮುಂಭಾಗ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6.30ರವರೆಗೆ ಹಿಂದು ಹಿತರಕ್ಷಣಾ ಸಮಿತಿ ಮತ್ತು ಇತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ 'ಜಿಹಾದಿಗಳಿಗೆ ಧಿಕ್ಕಾರ, ಪಿಎಸ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್ ನೆಟ್ಟಾರು ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್ ಮಾಡಬೇಕು' ಎಂದು ಘೋಷಣೆ ಕೂಗಿದ್ದರು.

ಇದರಿಂದ ಎಸ್.ಜೆ.ಪಾರ್ಕ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಆರ್. ಸತೀಶ ಅವರು ನಗರದ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ, ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್‌ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ ಮತ್ತು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್, ಚಕ್ರವರ್ತಿ ಸೂಲಿ ಬೆಲೆ ಸೇರಿದಂತೆ ಪ್ರಕರಣದ ಇತರ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಇದನ್ನೂ ಓದಿ: ಪ್ರವೀಣ್​ ನೆಟ್ಟಾರು ಹತ್ಯೆ ಕೇಸ್: ಆರೋಪಿಗಳ ಶರಣಾಗತಿಗೆ NIA ನೀಡಿದ ಅವಧಿ ಮುಕ್ತಾಯ; ಆಸ್ತಿ ಮುಟ್ಟುಗೋಲಿಗೆ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.