ETV Bharat / state

ಭಾರತೀಯ ಕುಸ್ತಿಪಟುಗಳ ಫೆಡರೇಶನ್ ಅಧ್ಯಕ್ಷರನ್ನು ಬಂಧಿಸುವಂತೆ ಒತ್ತಾಯ, ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳ ಹೋರಾಟವನ್ನು ಬೆಂಬಲಿಸಿ ವಿವಿಧ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದವು.

protest-at-freedom-park-demanding-the-arrest-of-the-president-of-wfi
ಭಾರತೀಯ ಕುಸ್ತಿಪಟುಗಳ ಫೆಡರೇಶನ್ ಅಧ್ಯಕ್ಷರನ್ನು ಬಂಧಿಸುವಂತೆ ಒತ್ತಾಯ, ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ
author img

By

Published : May 28, 2023, 9:03 PM IST

ಬೆಂಗಳೂರು: ಲೈಂಗಿಕ ದೌರ್ಜನ್ಯ ಸಂಬಂಧ ಭಾರತೀಯ ಕುಸ್ತಿಪಟುಗಳ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಬೆಂಬಲಿಸಿ ವಿವಿಧ ದಲಿತಪರ, ಮಹಿಳಾ, ಮುಸ್ಲಿಂ ಸಂಘಟನೆಗಳು ಸೇರಿದಂತೆ ಹಲವರು ನಗರದ ಫ್ರೀಡಂ ಪಾರ್ಕ್​ನಲ್ಲಿ ಇಂದು ಪ್ರತಿಭಟನೆಯನ್ನು ನಡೆಸಿದರು.

ಮಹಿಳಾ ಕುಸ್ತಿಪಟುಗಳ ಮೇಲೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾರೆ ಎಂದು ಆರೋಪಿಸಿ ನಾಲ್ಕು ತಿಂಗಳಿನಿಂದ ನಿರಂತರವಾಗಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸದೆ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ಥರು ದೆಹಲಿ ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮವನ್ನು ಜರುಗಿಸಿಲ್ಲ. ಹಾಗಾಗಿ ಸಂತ್ರಸ್ಥರು ಕೋರ್ಟ್​ ಮೊರೆ ಹೋಗಿ, ಆರೋಪಿ ಮೇಲೆ ಎರಡು ಎಫ್‌ಐಆರ್‌ಗಳ ದಾಖಲಾಗುವಂತೆ ಮಾಡಿದ್ದಾರೆ. ಆದರೆ ಇದುವರೆಗೂ ಆರೋಪಿಗಳನ್ನು ಸರ್ಕಾರ ಬಂಧಿಸಿಲ್ಲ. ಈ ಮೂಲಕ ಬಿಜೆಪಿ ಸರ್ಕಾರವು ಆರೋಪಿಗಳ ರಕ್ಷಣೆಗೆ ನಿಂತಿದೆ ಎಂದು ದೂರಿದರು.

ಈ ದೇಶದಲ್ಲಿ ಮಹಿಳಾ ಕ್ರೀಡಾಪಟುಗಳು ಪದಕಗಳನ್ನು ಗೆದ್ದರೆ, ಸನ್ಮಾನ ಮಾಡಲಾಗುತ್ತದೆ. ಆದರೆ ತಮಗೆ ಅನ್ಯಾಯವಾಗುತ್ತಿದೆ ಎಂದರೆ ಯಾವುದೇ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ. ಈಗಾಗಲೇ ಮಹಿಳೆಯರು ಕ್ರೀಡೆಯಲ್ಲಿ ಹಿಂದುಳಿದಿದ್ದಾರೆ. ಈಗ ಮಹಿಳಾ ಕ್ರೀಡಾಪಟುಗಳು ತಮಗೆ ಅನ್ಯಾಯವಾಗಿದೆ ಎಂದು ಬೀದಿಗೆ ಬಂದಿದ್ದಾರೆ. ಅವರಿಗೆ ನ್ಯಾಯವನ್ನು ಕೊಡಿಸದೆ ಇದ್ದರೆ, ಮಹಿಳೆಯರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವೇ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

ಮಹಿಳೆಗೆ ಅವಮಾನವನ್ನು ಮಾಡಿ, ನೂತನ ಸಂಸತ್ತನ್ನು ಈ ದೇಶದ ಪ್ರಧಾನಿ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆಗೆ ರಾಷ್ಟಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನವನ್ನೇ ನೀಡಿಲ್ಲ. ಬಿಜೆಪಿ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂದು ತಿಳಿಯಲು ಇದು ಕೇವಲ ಒಂದು ಸಣ್ಣ ಉದಾಹರಣೆಯಾಗಿದೆ ಎಂದು ನೈಜ ಹೋರಾಟಗಾರರ ವೇದಿಕೆಯ ಮುಖಂಡ ಹೆಚ್.ಎಂ.ವೆಂಕಟೇಶ್ ದೂರಿದರು. ಪ್ರತಿಭಟನೆಯಲ್ಲಿ ಅಭಿಲಾಶ್ ಪ್ರಭಾಕರನ್, ಡೇವಿಡ್, ಯೂಸೆಪ್ ಕನ್ನಿ, ಅಕ್ಬರ್ ಅಲಿ ಮತ್ತಿತರರು ಉಪಸ್ಥಿತರಿದ್ದರು.

ಪೊಲೀಸರಿಂದ ಪ್ರತಿಭಟನಾ ಸ್ಥಳ ತೆರವು: ಮತ್ತೊಂದೆಡೆ, ಕಾನೂನು ಸುವ್ಯವಸ್ಥೆಯನ್ನು ಉಲ್ಲಂಘಿಸಿದ ಆರೋಪದಡಿ ಪ್ರತಿಭಟನೆ ನಡೆಸುತ್ತಿರುವ ಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿ ಹಲವರನ್ನು ಇಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಪ್ರತಿಭಟನಾ ಸ್ಥಳವಾದ ಜಂತರ್​ ಮಂತರ್​ನಲ್ಲಿನ ಕುಸ್ತಿಪಟುಗಳ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ್ದಾರೆ.

ಬಿಜೆಪಿ ಸಂಸದರಾದ ಡಬ್ಲ್ಯುಎಫ್‌ಐ ಅಧ್ಯಕ್ಷ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಏಪ್ರಿಲ್ 23ರಂದು ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಇಂದು ಹೊಸ ಸಂಸತ್ ಭವನದ ಮುಂದೆ ಮಹಿಳಾ ಸಮ್ಮಾನ್ ಮಹಾಪಂಚಾಯತ್ ಹೆಸರಲ್ಲಿ ಪ್ರತಿಭಟನೆ ನಡೆಸಲು ಮುಂದಾಗ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ನೂತನ ಸಂಸತ್​ ಭವನದತ್ತ ಹೊರಟ ಕುಸ್ತಿಪಟುಗಳ ಬಂಧನ: ಪೊಲೀಸರಿಂದ ಪ್ರತಿಭಟನಾ ಸ್ಥಳ ತೆರವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.