ಬೆಂಗಳೂರು: ರಾಜಾಜಿನಗರದ ಲೂಲು ಮಾಲ್ ಎದುರು ಉಮಾ ಎಂಬ ಮಹಿಳೆ ರಸ್ತೆ ಗುಂಡಿಯ ಕಾರಣದಿಂದ ಮಾರಣಾಂತಿಕ ಅಪಘಾತಕ್ಕೀಡಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಘಟನೆ ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಸ್ತೆ ತಡೆಯಲು ಹೋದಾಗ ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಬಂಧಿಸಿ ಉಗ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಕೂಡಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿ ರಸ್ತೆಯಲ್ಲಿ ಉರುಳು ಸೇವೆಯನ್ನು ಮಾಡಿ, ಬೈಕ್ ಪ್ರತಿಕೃತಿಯನ್ನಿಟ್ಟು ಪ್ರತಿಭಟಿಸಿದರು. ಸ್ಥಳದಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಸೇರಿದಂತೆ ರಮೇಶ್, ದಿನೇಶ್ ,ಶರವಣ , ವೇಣುಗೋಪಾಲ್, ವಿಶ್ವನಾಥ್ಮುಂತಾದ ಸ್ಥಳೀಯ ಆಮ್ ಆದ್ಮಿ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ: ರಜಪೂತರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಸಿ ಟಿ ರವಿ ವಿರುದ್ಧ ಪ್ರತಿಭಟನೆ