ETV Bharat / state

ಕೋವಿಡ್ ವಿಮೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಬಿಎಂಪಿ ನೌಕರರ ಪ್ರತಿಭಟನೆ

author img

By

Published : Feb 18, 2021, 6:02 PM IST

ಕೋವಿಡ್ ಸಂದರ್ಭದಲ್ಲಿ ಕೆಲಸ‌ ನಿರ್ವಹಿಸಿ ಮೃತಪಟ್ಟ ಕುಟುಂಬಗಳಿಗೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿ/ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಒತ್ತಾಯಿಸಿದ್ದಾರೆ.

protest-by-bbmp-employees-demanding-various-demands-including-covid-insurance
ಕೋವಿಡ್ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಬಿಎಂಪಿ ನೌಕರರಿಂದ ಪ್ರತಿಭಟನೆ

ಬೆಂಗಳೂರು: ಬಿಬಿಎಂಪಿಯಲ್ಲಿ ಕೋವಿಡ್​ನಿಂದ ಮೃತಪಟ್ಟ 18 ಜನರಿಗೆ ವಿಮಾ ಹಣಕ್ಕೆ ಆಗ್ರಹಿಸಿ ಹಾಗೂ ನೇಮಕಾತಿಯಲ್ಲಿ ತಂದಿರುವ ಹೊಸ ನಿಯಮಗಳನ್ನು ವಿರೋಧಿಸಿ ಬಿಬಿಎಂಪಿ ಅಧಿಕಾರಿ/ ನೌಕರರ ಸಂಘದ ನೇತೃತ್ವದಲ್ಲಿ ನೂರಾರು ನೌಕರರು ಇಂದು ಕಚೇರಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟಿಸಿದ್ದಾರೆ.

ಬಳಿಕ ಮಾತನಾಡಿದ ಸಂಘದ ಅಧ್ಯಕ್ಷ ಅಮೃತ್ ರಾಜ್, ಬಿಬಿಎಂಪಿಗೆ ಮಂಜೂರಾತಿಯಾದ ಸುಮಾರು 10 ಸಾವಿರಕ್ಕೂ ಹೆಚ್ಚಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ಎಂದು ಒತ್ತಾಯಿಸಿದ ಅವರು, ಈಗಾಗಲೇ ಕೆಲಸ ಮಾಡುತ್ತಿರುವ ನೌಕರರ ಮೇಲೆ ಹೆಚ್ಚಿನ ಕೆಲಸದ ಹೊರೆ ಬಿದ್ದಿದೆ ಎಂದರು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಬಿಎಂಪಿ ನೌಕರರಿಂದ ಪ್ರತಿಭಟನೆ

ಓದಿ: ಕುರುಬ ಸಮುದಾಯದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್​​ ಮಾಡಿದ ಸಿದ್ದರಾಮಯ್ಯ

ಕೋವಿಡ್ ಸಂದರ್ಭದಲ್ಲಿ ಕೆಲಸ‌ ನಿರ್ವಹಿಸಿ ಮೃತಪಟ್ಟವರ ಕುಟುಂಬಗಳಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು. ಸುಮಾರು 18 ನೌಕರರು ಕೋವಿಡ್​ನಿಂದಾಗಿ ಮೃತಪಟ್ಟಿದ್ದಾರೆ. ಬಿಬಿಎಂಪಿಗೆ ಬೆಂಬಲವಾಗಿ ರಾಜ್ಯದ ಎಲ್ಲಾ ಪಾಲಿಕೆಗಳು ಪ್ರತಿಭಟನೆ ಮಾಡುತ್ತಿವೆ. ಎಲ್ಲಾ ಮಹಾನಗರ ಪಾಲಿಕೆಗಳಲ್ಲೂ ಸಮಸ್ಯೆ ಇದೆ. ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಹಿದಾಯತುಲ್ಲಾ ಅವರನ್ನು ಕೂಡಲೆ ವರ್ಗಾವಣೆ ಮಾಡಬೇಕು. ಮುಖ್ಯಮಂತ್ರಿಗಳು ನಮ್ಮ ಬೇಡಿಕೆ ಈಡೇರಿಸುವ ವಿಶ್ವಾಸ ಇದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.