ಬೆಂಗಳೂರು: ಹೆಚ್.ವಿಶ್ವನಾಥ್ ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಇಂದು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯರಾದ ಹೆಚ್. ವಿಶ್ವನಾಥ್ ಅತ್ಯಂತ ಗಂಭೀರ ಆರೋಪವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಹಾಗೂ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಡಿದ್ದಾರೆ. ಕಳೆದ ಹುಣಸೂರು ವಿಧಾನಸಭೆಯ ಉಪ ಚುನಾವಣೆ ಸಂದರ್ಭದಲ್ಲಿ ಹೆಚ್ಚಿನ ಹಣ ನೀಡಿದರೂ ತಮಗೆ ತಲುಪಿಸಿಲ್ಲ ಹಾಗೂ ಸಿ.ಪಿ.ಯೋಗೇಶ್ವರ್ ಸೂಟ್ಕೇಸ್ ಹಿಡಿದು ಸುತ್ತಾಡುತ್ತಿದ್ದ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್. ವಿಶ್ವನಾಥ್ ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಓದಿ: ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಗಾಂಧಿ ಬಜಾರ್ ದಿಢೀರ್ ಬಂದ್
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಸರ್ಕಾರ ಪತನಗೊಳಿಸಲು ಆಪರೇಷನ್ ಕಮಲಕ್ಕೆ ಅಕ್ರಮ ಹಣ ಸುರಿದು ಸರ್ಕಾರ ಪತನಗೊಳಿಸುವಲ್ಲಿ ಸಿ.ಪಿ.ಯೋಗೇಶ್ವರ್, ಎನ್.ಆರ್. ಸಂತೋಷ್ ಪಾತ್ರ ಮುಖ್ಯವಾಗಿತ್ತು ಎಂದು ಕಾಂಗ್ರೆಸ್ ಪಕ್ಷ ಈ ಹಿಂದೆಯೇ ಆರೋಪ ಮಾಡಿತ್ತು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಸಹ ಆಗ್ರಹಿಸಿತ್ತು. ಆದರೆ ಬಿಜೆಪಿ ಅಕ್ರಮ ಹಣದ ಬಗ್ಗೆ ಯಾವ ತನಿಖೆಯೂ ಸಹ ನಡೆಸಿಲ್ಲ ಎಂದು ಆಗ್ರಹಿಸಿದರು.
ಇಂದು ಬಿಜೆಪಿ ಪಕ್ಷದ ಪ್ರಮುಖ ನಾಯಕರಾದ ಹೆಚ್. ವಿಶ್ವನಾಥ್ ಅವರೇ ಎನ್.ಆರ್.ಸಂತೋಷ್, ಸಿ.ಪಿ ಯೋಗೇಶ್ವರ್ ಅವರ ಅವ್ಯವಹಾರದ ಬಗ್ಗೆ ಬಹಿರಂಗಪಡಿಸಿದ್ದಾರೆ. ಈ ಪ್ರಕರಣದಿಂದ ಬಿಜೆಪಿಯ ಭ್ರಷ್ಟಾಚಾರ ಬಯಲಾಗಿದ್ದು ಸರ್ಕಾರ ಪತನಗೊಳಿಸಲು ನಡೆಸಿದ್ದು ಇಂದು ಮತ್ತೊಮ್ಮೆ ಸಾಬೀತಾಗಿದೆ. ಆದ್ದರಿಂದ ಕೂಡಲೇ ರಾಜ್ಯದ ಜನತೆಗೆ ಸತ್ಯಾಂಶ ತಿಳಿಸಲು ಈ ಅಕ್ರಮ ಹಣದ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಸರ್ಕಾರ ತನಿಖೆ ನಡೆಸದೆ ಹೋದರೆ ಸಿಬಿಐ ಹಾಗೂ ಇ.ಡಿ. ಆದಾಯ ಇಲಾಖೆಗಳು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾದ ಎಸ್. ಮನೋಹರ. ಜಿ. ಜನಾರ್ಧನ್, ಎ. ಆನಂದ್, ಈ ಶೇಖರ್, ಎಲ್. ಜಯಸಿಂಹ ಶ್ರೀಧರ್, ಮಹೇಶ್ ಪುಟ್ಟರಾಜು, ಚಂದ್ರು ಶಶಿಭೂಷಣ್ ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.