ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಖಾಸಗಿ ಶಾಲಾ ಮತ್ತು ಮಕ್ಕಳ ಕಲ್ಯಾಣ ಸಂಘ ಸೇರಿದಂತೆ ಇನ್ನಿರ ಖಾಸಗಿ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಶಿಕ್ಷಕರ ಮೂಲಭೂತ ಹಕ್ಕುಗಳಿಗಾಗಿ ಹೋರಾಟದ ಕುರಿತು ಮತ್ತು ಶಾಲೆಗಳನ್ನು ಸ್ಥಗಿತಗೊಳಿಸಿರುವುದರಿಂದ ಖಾಸಗಿ ಶಾಲೆಗಳ ನಿರ್ವಾಹಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿಭಟನೆಯಲ್ಲಿ ದನಿ ಎತ್ತಿದರು. ಜೊತೆಗೆ, ಶಿಕ್ಷಕರಿಗೆ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸರ್ಕಾರದ ವತಿಯಿಂದ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಸಂಪೂರ್ಣ ಸುರಕ್ಷತೆ ಮತ್ತು ಮುನ್ನೆಚ್ಚರಿಕೆಗಳೊಂದಿಗೆ ಶಾಲೆಗಳನ್ನು ನಡೆಸಲು ಶಾಲೆಗಳಿಗೆ ಸರಿಯಾದ ಎಸ್.ಓ.ಪಿ ಒದಗಿಸಿ ಶಾಲೆಗಳನ್ನು ತೆರೆಯಲು ಅನಮತಿ ನೀಡಬೇಕೆಂಬ ಒತ್ತಾಯ ಕೇಳಿಬಂತು.
ಇನ್ನು ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಕೊರೊನಾ ಲಸಿಕೆಯನ್ನು ಅವರಿಗೆ ಆದ್ಯತೆಯಾಗಿ ನೀಡಬೇಕು. ಖಾಸಗಿ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಪ್ರತ್ಯೇಕ ವಿಮಾ ಸೌಲಭ್ಯ ಒದಗಿಸಬೇಕು. ಜೊತೆಗೆ ಕಡ್ಡಾಯವಾಗಿ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆಯನ್ನು ಪ್ರತಿ ವಿದ್ಯಾರ್ಥಿಗೆ ನೀಡಬೇಕು. ಹಾಗೂ ಬಡ್ತಿ ಮುಂದುವರೆಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ಓದಿ: ವಿಧಾನ ಪರಿಷತ್ನಲ್ಲಿ ಹೈಡ್ರಾಮಾ - ಬಿಜೆಪಿ-ಕಾಂಗ್ರೆಸ್ ಸದಸ್ಯರ ಮಧ್ಯೆ ಕಿತ್ತಾಟ