ETV Bharat / state

ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ: ಎಂಇಎಸ್​ ನಿಷೇಧಿಸಲು ಆಗ್ರಹ

ಕನ್ನಡ ಪರ ಸಂಘಟನೆಗಳು ರಾಜ್ಯವ್ಯಾಪಿ ಬಂದ್ ಬದಲಿಗೆ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿವೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಜಾಥಾ ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೂ ನಡೆಯಲಿದೆ.

Kannada organizations protest, Kannada organizations mass protest, Kannada organizations protest in Bengaluru, Karnataka bundh cancel, ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಕನ್ನಡ ಪರ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ, ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಕರ್ನಾಟಕ ಬಂದ್​ ಕ್ಯಾನ್ಸಲ್​,
ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ
author img

By

Published : Dec 31, 2021, 2:15 PM IST

Updated : Dec 31, 2021, 4:31 PM IST

ಬೆಂಗಳೂರು: ರಾಜ್ಯ ಬಂದ್ ಬದಲಿಗೆ ಸಾಂಕೇತಿಕ ಪ್ರತಿಭಟನೆ ಕೈಗೊಂಡಿರುವ ಕನ್ನಡಪರ ಸಂಘಟನೆಗಳು ಎಂಇಎಸ್ ನಿಷೇಧಕ್ಕಾಗಿ ಆಗ್ರಹಿಸಿದ್ದಾರೆ. ನಿನ್ನೆ ಸಿಎಂ ಮನವಿಯ ಮೇರೆಗೆ ಬಂದ್ ‌ನಿರ್ಧಾರವನ್ನು ವಾಟಾಳ್​ ಸೇರಿದಂತೆ ಕನ್ನಡಪರ ಸಂಘಟನೆಗಳು ಕೈಬಿಟ್ಟಿದ್ದವು. ಈ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕ ಪ್ರತಿಭಟನೆ ಕೈಗೊಂಡಿದ್ದಾರೆ.

ವಾಟಾಳ್ ನಾಗರಾಜ್, ಸಾರಾ ಗೋವಿಂದು, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮೆರವಣಿಗೆ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ

ಇನ್ನು, ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಸೇರುವ ಸಾಧ್ಯತೆಯಿದ್ದು, ಭದ್ರತೆಗೆ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಹಾಗೂ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಭದ್ರತೆಯ ಹೊಣೆ ಹೊತ್ತಿದ್ದಾರೆ

ಇದನ್ನೂ ಓದಿ: ಡಿಕೆಶಿಗೆ ಬೆಕ್ಕಿನ ಕನಸಲ್ಲಿ ಇಲಿ ಎಂಬಂತಾಗಿದೆ: ಸಿಎಂ ತಿರುಗೇಟು

ಟೌನ್​ಹಾಲ್​ನಿಂದ‌ ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಆನಂದರಾವ್ ಸರ್ಕಲ್ ಬಳಿಕ ಫ್ರೀಡಂ ಪಾರ್ಕ್​ವರೆಗೂ ಪ್ರತಿಭಟನಾ ಜಾಥಾ ನಡೆಯಲಿದೆ. ಫ್ರೀಡಂ ಪಾರ್ಕ್ ಬಳಿ 10 ಕೆ.ಎಸ್.ಆರ್.ಪಿ ಹಾಗೂ ಕೇಂದ್ರ ಮೀಸಲು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ನಿವಾಸಿ ವೈದ್ಯರು: ಇಂದು ಮಧ್ಯಾಹ್ನ 12 ಗಂಟೆಯಿಂದ ಸೇವೆ ಪುನಾರಂಭ

Last Updated : Dec 31, 2021, 4:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.