ETV Bharat / state

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ

Protest Against Eshwarappa case: ಈ ಹಿಂದೆ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿದ್ದ ಪ್ರಕರಣ ಕುರಿತು ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

protest-demanding-eshwarappa-resignation-high-court-stays-case-against-siddaramaiah
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಪ್ರಕರಣ : ಸಿದ್ದರಾಮಯ್ಯ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ
author img

By ETV Bharat Karnataka Team

Published : Sep 8, 2023, 7:41 PM IST

ಬೆಂಗಳೂರು: ಭ್ರಷ್ಟಾಚಾರದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಸಂಬಂಧ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಧಾರವಾಡ ಪೀಠ, ಮುಂದಿನ ವಿಚಾರಣೆವರೆಗೆ ಪ್ರಕರಣ್ಕಕೆ ತಡೆ ನೀಡಿತು. ಅಲ್ಲದೇ, ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಸೆಪ್ಟೆಂಬರ್​​ 15ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ 2022ರ ಏಪ್ರಿಲ್ 14 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದರ ಭಾಗವಾಗಿ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಯವರ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಹಲವು ಸಲ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸದ ಕಾರಣ ಎಲ್ಲ ಮುಖಂಡರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​ ನಾಯಕರಾದ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಹಮ್ಮದ್ ನಲಪಾಡ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್, ಶ್ರೀನಿವಾಸ್, ರಾಮಲಿಂಗಾರೆಡ್ಡಿ, ಉಗ್ರಪ್ಪ, ಐವಾನ್ ಡಿಸೋಜಾ, ಟಿ.ಬಿ.ಜಯಚಂದ್ರ, ಪ್ರಕಾಶ್ ರಾಥೋಡ್, ಪುಷ್ಪಾ ಅಮರನಾಥ್ ಸೇರಿ 36 ಮಂದಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಆಗಿದ್ದ ಜಹೀದಾ ಅವರು ದೂರು ದಾಖಲಿಸಿದ್ದರು.

ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುವುದು, ಕಾನೂನು - ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಪ್ರತಿಭಟನಾಕಾರರ ವಿರುದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು 2023ರ ಫೆಬ್ರುವರಿ 12 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು.

ಪ್ರಕರಣವನ್ನು ಜೂನ್ 13 ರಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿತ್ತು. ಪ್ರಕರಣ, ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಸಿದ್ದರಾಮಯ್ಯ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ​ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.