ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳು, ಮೊಮ್ಮಕ್ಕಳಿಗೆ ವಿವಿಧ ಸವಲತ್ತುಗಳಿಗೆ ಆಗ್ರಹಿಸಿ ನಗರದಲ್ಲಿಂದು ಪ್ರತಿಭಟನೆ ನಡೆಯಿತು.
ಕರ್ನಾಟಕ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘ (ಹಾವೇರಿ) ವತಿಯಿಂದ ಇಂದು ಫ್ರೀಡಂ ಪಾರ್ಕ್ನಲ್ಲಿ ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದರು. ಮಳ್ಳಪ್ಪ ಸಿದ್ದಪ್ಪ ಕೊಪ್ಪದ ಅವರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು.
2) ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳ ವಂಶಸ್ಥರಿಗೆ ಮಾಸಿಕ ಗೌರವಧನ ನೀಡಲು ಆದೇಶಿಸುವುದು.
3)ಇವರ ಕುಟುಂಬಗಳ ವಂಶಸ್ಥರಿಗೆ, ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಾರತಮ್ಯ ಮಾಡದೇ ಜಿಲ್ಲಾಧಿಕಾರಿಗಳಿಂದ ಗುರುತಿನ ಪತ್ರ ಅಂದರೆ ಕನ್ನಡ ಹಾಗೂ ಇಂಗ್ಲೀಷಿನಲ್ಲಿ "ಉತ್ತರಾಧಿಕಾರಿಗಳ ಪ್ರಮಾಣ ಪತ್ರ" ವನ್ನು ಕುಟುಂಬದವರಿಗೂ ಜಿಲ್ಲಾಧಿಕಾರಿಗಳಿಗೆ ಆದೇಶಿಸುವುದು.
4) ಹೋರಾಟಗಾರರ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಹಾಗೂ ಸರ್ಕಾರಿ ನೌಕರಿಯಲ್ಲಿ ಶೇ.5 ರಷ್ಟು ಮೀಸಲಾತಿ ಒದಗಿಸುವುದು.
5) ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲು ಆದೇಶಿಸಬೇಕು.
6) ರಿಯಾಯಿತಿ ದರದಲ್ಲಿ ವಿದ್ಯುಚ್ಛಕ್ತಿ ಪೂರೈಕೆ.
7)ಸ್ವಾತಂತ್ರ್ಯ ಹೋರಾಟಗಾರರ ಅಂತ್ಯಸಂಸ್ಕಾರಕ್ಕೆ ಈಗ ಕೊಡುತ್ತಿರುವ 4 ಸಾವಿರವನ್ನು 10 ಸಾವಿರಕ್ಕೆ ಏರಿಕೆ ಮಾಡಬೇಕು.
8) ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಉಪಚಾರ ಪಡೆಯಲು ಆದೇಶ ಕೊಡಬೇಕು.
9) ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಗಂಡು ಮತ್ತು ಹೆಣ್ಣು ಮಕ್ಕಳಿಗೂ ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ಕಾರ್ಪೋರೇಷನ್ ಗಳಿಂದ ಉಚಿತವಾಗಿ ನಿವೇಶನ ಕೊಡಲು ಆದೇಶಿಸಬೇಕು.