ಬೆಂಗಳೂರು: ನಗರದ ನ್ಯಾಷನಲ್ ಕಾಲೇಜು ಮೈದಾನದಿಂದ ಒಕ್ಕಲಿಗರ ಸಂಘ ಸಂಸ್ಥೆಗಳ ಒಕ್ಕೂಟ ಹಮ್ಮಿಕೊಂಡಿರುವ ಪ್ರತಿಭಟನೆ ಸಂಪೂರ್ಣವಾಗಿ ಮುಕ್ತಾಯಗೊಂಡ ನಂತರ ರಾಜಭವನಕ್ಕೆ ಒಕ್ಕಲಿಗ ನಾಯಕರ ನಿಯೋಗ ಭೇಟಿ ನೀಡಿತು.
ಕರವೇ ಅಧ್ಯಕ್ಷ ನಾರಾಯಾಣಗೌಡ ಮಾತನಾಡಿ, ರಾಜ್ಯಪಾಲರನ್ನು ಭೇಟಿ ಮಾಡಿ ಡಿಕೆಶಿ ಹಾಗೂ ನಮ್ಮ ಒಕ್ಕಲಿಗರ ಸಂಘಟನೆ ಮೇಲೆ ಕೇಂದ್ರದಿಂದ ದಬ್ಬಾಳಿಕೆ ನಡೆಯುತ್ತಿದೆ. ಹೀಗಾಗಿ ರಾಜ್ಯಪಾಲರು ಕೇಂದ್ರ ಗೃಹ ಇಲಾಖೆಗೆ ಸೂಚನೆ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಡಿಕೆಶಿ ಅವರ ಅಪಾರ ಅಭಿಮಾನಿಗಳು ಇಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ನಮ್ಮ ಧನ್ಯವಾದಗಳು. ಮನವಿ ಪತ್ರ ನೋಡಿ ಕೇಂದ್ರ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಕಾದು ನೋಡೋಣ. ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ನಾರಾಯಣಗೌಡ ಹೇಳಿದರು.