ETV Bharat / state

ಕುಡಿಯುವ ನೀರು ಪೂರೈಕೆಗೆ ಆಗ್ರಹ: ಖಾಲಿಕೊಡ ಪ್ರದರ್ಶಿಸಿ ಪ್ರತಿಭಟನೆ - ಪ್ರಜಾವಿಮೋಚನಾ ಚಳವಳಿ

ಚಿಕ್ಕಜಾಲದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಮೀನುಕುಂಟೆ ಹೊಸೂರು ಗ್ರಾಮಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ವಿವಿಧ ಘೋಷಣೆಗಳನ್ನು ಕೂಗಿ ಈ ಕೂಡಲೇ ನೀರು ಸರಬರಾಜು ಮಾಡಬೇಕೆಂದು ಪಟ್ಟು ಹಿಡಿದರು.

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ
author img

By

Published : Jun 20, 2019, 4:37 AM IST

ಬೆಂಗಳೂರು: ನಗರದ ಏರ್​ಪೋರ್ಟ್​ ರಸ್ತೆಯ ಮೀನುಕುಂಟೆ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು, ಈ ಕೂಡಲೇ ಸಮರ್ಪಕವಾಗಿ ನೀರು ಒದಗಿಸಬೇಕೆಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿ(ಸ್ವಾಭಿಮಾನ) ಬೆಂಗಳೂರು ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಚಿಕ್ಕಜಾಲದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಮೀನುಕುಂಟೆ ಹೊಸೂರು ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ವಿವಿಧ ಘೋಷಣೆಗಳನ್ನು ಕೂಗಿ ಈ ಕೂಡಲೇ ನೀರು ಸರಬರಾಜು ಮಾಡಬೇಕೆಂದು ಪಟ್ಟು ಹಿಡಿದರು.

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ

ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಪಿವಿಸಿ ಸ್ವಾಭಿಮಾನ ಸಂಘಟನೆ ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ, ಗ್ರಾಮಪಂಚಾಯತಿ ವ್ಯಾಪ್ತಿಯ ಹುತ್ತನಹಳ್ಳಿ, ಮಾರನಾಯಕನಹಳ್ಳಿ ಮತ್ತು ಕಾಲೋನಿ, ಕೋಳಿಪುರ ಹಾಗೂ ಹೊಸೂರು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಆದರೆ ಗ್ರಾಮ ಪಂಚಾಯತಿಯಿಂದ ಈ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದೆ, 15 ದಿನಗಳಿಗೊಮ್ಮೆ ಒಂದೆರಡು ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವುದರಿಂದ ಜನರು ನಿತ್ಯವೂ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಗ್ರಾಮಗಳಲ್ಲಿ ಉಲ್ಬಣಗೊಂಡಿರುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಬರಗಾಲ ಇರುವುದರಿಂದ ವಿಶೇಷ ಆದ್ಯತೆ ಮೇರೆಗೆ ಸರ್ಕಾರದಲ್ಲಿ ನಿಗದಿಯಾಗಿರುವ ಅನುದಾನದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕೊಳವೆಬಾವಿಗಳನ್ನು ಕೊರೆಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸದಿದ್ದರೆ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:ಸಂಜಯ್ ನಾಗ್ ಬೆಂಗಳೂರು, KA10014
**""""""""""""""""""""

ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡಲು ಆಗ್ರಹ: ಖಾಲಿಕೊಡ ಪ್ರದರ್ಶಿಸಿ ಪ್ರತಿಭಟನೆ

ಬೆಂಗಳೂರು: ನಗರದ ಏರ್ಪೋರ್ಟ್ ರಸ್ತೆಯ ಮೀನುಕುಂಟೆ ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವನೀರಿನ ಅಭಾವ ಸೃಷ್ಟಿಯಾಗಿದ್ದು, ಈ ಕೂಡಲೇ ಸಮರ್ಪಕವಾಗಿ ನೀರು ಒದಗಿಸಬೇಕೆಂದು ಆಗ್ರಹಿಸಿ ಪ್ರಜಾವಿಮೋಚನಾ ಚಳವಳಿ(ಸ್ವಾಭಿಮಾನ)ಬೆಂಗಳೂರು ನಗರಜಿಲ್ಲಾ ಘಟಕದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಚಿಕ್ಕಜಾಲದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಮೀನುಕುಂಟೆ ಹೊಸೂರು ಗ್ರಾಮಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ವಿವಿಧ ಘೋಷಣೆಗಳನ್ನು ಕೂಗಿ ಈ ಕೂಡಲೆ ನೀರು ಸರಬರಾಜು ಮಾಡಬೇಕೆಂದು ಪಟ್ಟು ಹಿಡಿದರು.

ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಪಿವಿಸಿ ಸ್ವಾಭಿಮಾನ ಸಂಘಟನೆ ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ, ಗ್ರಾಮಪಂಚಾಯ್ತಿ ವ್ಯಾಪ್ತಿಯ ಹುತ್ತನಹಳ್ಳಿ, ಮಾರನಾಯಕನಹಳ್ಳಿ ಮತ್ತು ಕಾಲೋನಿ, ಕೋಳಿಪುರ ಹಾ ಗೂ ಹೊಸೂರು ಗ್ರಾಮಗಳಲ್ಲಿ ಪರಿಶಿಷ್ಟಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಆದರೆ ಗ್ರಾಮಪಂಚಾಯಿತಿಯಿಂದ ಈ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿ ಯುವ ನೀರಿನ ವ್ಯವಸ್ಥೆ ಕಲ್ಪಿಸದೆ, 15 ದಿನಗಳಿಗೊಮ್ಮೆ ಒಂದೆ ರೆಡು ಟ್ಯಾಂಕರ್ ನೀರನ್ನು ಸರಬರಾಜು ಮಾಡುತ್ತಿರುವುದರಿಂದ ಜನರು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಗ್ರಾಮಗಳಲ್ಲಿ ಉಲ್ಬಣಗೊಂಡಿರುವ ನೀರಿನ ಸಮಸ್ಯೆಯನ್ನು ಗಂಭೀರ ವಾಗಿ ಪರಿಗಣ ಸಬೇಕು. ಬರಗಾಲ ಇರುವುದರಿಂದ ವಿಶೇಷ ಆದ್ಯತೆ ಮೇರೆಗೆ ಸರ್ಕಾರದಲ್ಲಿ ನಿಗಧಿಯಾಗಿರುವ ಅನುದಾನದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕೊಳವೆಬಾವಿಗಳನ್ನು ಕೊರೆಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಸಮಸ್ಯೆ ಯನ್ನು ಬಗೆಹರಿಸದಿದ್ದರೆ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯಕ್ಕೆ ಮುತ್ತಿಗೆಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Body:ಬೆಂಗಳೂರು ನಗರಜಿಲ್ಲಾ ಘಟಕದ ಅಧ್ಯಕ್ಷ ಅಯೂಬ್‍ಖಾನ್ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವ ಬಡಕುಟುಂಬಗಳಿಗೆ ಶೌಚಾಲಯ, ಬೀದಿದೀಪಗಳ ವ್ಯವಸ್ಥೆ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಗ್ರಾಮಗಳ ಚರಂಡಿಗಳಲ್ಲಿ ಸಂಗ್ರಹವಾಗಿರುವ ಹೂಳನ್ನು ತೆರವುಗೊಳಿಸಬೇಕು. ಪರಿಶಿಷ್ಟಜಾತಿ-ಪಂಗಡದ ಸಮುದಾ ಯಗಳ ಅಭಿವೃದ್ಧಿಗಾಗಿ ಸರ್ಕಾರ ಮೀಸಲಿರಿಸಿರುವ ಶೇ.24.1ರ ಅನುದಾನವನ್ನು ಶಿಕ್ಷಣ, ವಸತಿ, ಚರಂಡಿ ಮತ್ತು ಶೌಚಾಲಯ ಮತ್ತಿತರ ಮೂಲಸೌಕರ್ಯಗಳಿಗೆ ಸಮರ್ಪಕವಾಗಿ ಬಳಕೆಮಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಜಯ್, ಸ್ಥಳೀಯ ಶಾಸಕರ ಮ ತ್ತು ಜಿಲ್ಲಾಪಂಚಾಯಿತಿ ಅನುದಾ ನದಲ್ಲಿ ಶೀಘ್ರದಲ್ಲೇ ಮಾರನಾಯಕನಹಳ್ಳಿಯಲ್ಲಿ 3 ಕೊಳವೆಬಾವಿಗ ಳನ್ನು ಕೊರೆಸಲಾಗುವುದು. ಸದ್ಯಕ್ಕೆ ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರುಸರಬರಾಜು ಮಾಡುವ ಮೂಲಕ ಮುಂದಿ ನದಿನಗಳಲ್ಲಿ ನೀರಿನಸಮಸ್ಯೆ ತಲೆದೋರದ ರೀತಿಯಲ್ಲಿ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Conclusion:ಪ್ರತಿಭಟನೆಯಲ್ಲಿ ಪ್ರಜಾ ವಿಮೋಚನಾ ಚಳವಳಿ(ಸ್ವಾಭಿಮಾನ) ಬೆಂ.ನಗರ ಜಿಲ್ಲಾಧ್ಯಕ್ಷ ಅಯೂಬ್‍ಖಾನ್, ಬೆಂ.ಉತ್ತರ ತಾಲ್ಲೂಕು ಅಧ್ಯಕ್ಷ ಬೆಳ್ಳಹಳ್ಳಿ ಕಾಂತರಾಜು, ಬೆಂ.ಗ್ರಾಮಾಂತರ ಜಿಲ್ಲಾಧ್ಯಕ್ಷ ಗುಳ್ಳೆ ಹನುಮಯ್ಯ, ಬೆಂ.ನಗರ ಜಿಲ್ಲಾ ಕಾರ್ಯದರ್ಶಿ ಚನ್ನಮರಿಯಪ್ಪ, ಜಾಲ ಹೋಬಳಿ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ರವಿ, ಉಪಾಧ್ಯಕ್ಷ ದಾಸಪ್ಪ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸೋಲೂರು ನಾಗರಾಜ್, ಯಲಹಂಕ ತಾಲ್ಲೂಕು ಮಹಿಳಾಧ್ಯಕ್ಷೆ ಮುನಿಲಕ್ಷ್ಮಮ್ಮ, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸಂಘಟನಾ ಕಾರ್ಯದರ್ಶಿ ಗಂಗಮ್ಮ, ಪದಾಧಿಕಾರಿಗಳಾದ ವೆಂಕಟರಮಣರೆಡ್ಡಿ, ವೆಂಕಟೇಶ್ ಸೇರಿದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರಿದ್ದರು.

**""""""""""
ಬೈಟ್ ೧: ಮುನಿಆಂಜನಪ್ಪ , ರಾಜ್ಯಾಧ್ಯಕ್ಷ
ಪ್ರಜಾವಿಮೋಚನಾ ಚಳವಳಿ(ಸ್ವಾಭಿಮಾನ)
_____________________________
ಬೈಟ್ ೨: ಅಜಯ್ , ಪಿಡಿಓ, ಮೀನುಕುಂಟೆ ಗ್ರಾಮ ಪಂಚಾಯತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.