ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು.
ವಿವಿಧ ಅಲ್ಪಸಂಖ್ಯಾತ ಸಂಘಟನೆಗಳ ನೇತೃತ್ವದಲ್ಲಿ ಪ್ರೇಜರ್ ಟೌನ್ ಬಳಿಯ ಮಸೀದಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.
ನಾವು ಭಾರತೀಯರು, ಕೇಂದ್ರ ಸರ್ಕಾರ ಮುಸಲ್ಮಾನರನ್ನು ಗುರಿಯಾಗಿಸಿಕೊಂಡು ಈ ಕಾಯ್ದೆಯನ್ನು ಜಾರಿಗೆ ತಂದಿದೆ. ಆದ್ದರಿಂದ ಕೂಡಲೇ ಈ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.