ETV Bharat / state

ಟಿಕೆಟ್​ ಹಂಚಿಕೆ ಅಸಮಾಧಾನ: ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಟಿಕೆಟ್​​ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಜನರು ಪ್ರತಿಭಟನೆ ನಡೆಸಿದ್ದಾರೆ.

protest-in-front-of-siddaramaiah-house
ಟಿಕೆಟ್​ ಹಂಚಿಕೆ ವಿಚಾರ : ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ
author img

By

Published : Mar 30, 2023, 1:46 PM IST

Updated : Mar 30, 2023, 2:17 PM IST

ಟಿಕೆಟ್​ ಹಂಚಿಕೆ ವಿಚಾರ: ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು : ಕೆಲವು ಕ್ಷೇತ್ರಗಳಲ್ಲಿ ಟಿಕೆಟ್​ ಹಂಚಿಕೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದ ಬಳಿ ಇಂದು ಜನರು ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್​ ಆಕಾಂಕ್ಷಿ ನಾಗಲಕ್ಷ್ಮೀ ಚೌಧರಿ, ಪಿ.ಎನ್.ಕೃಷ್ಣ ಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ದಾಸರಹಳ್ಳಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬೆಂಬಲಿಗರು ಜಮಾಯಿಸಿದ್ದು, ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ದಾಸರಹಳ್ಳಿ ಕ್ಷೇತ್ರದಲ್ಲಿ ಧನಂಜಯ್​ಗೆ ಟಿಕೆಟ್ ನೀಡುವುದು ಬೇಡ ಎಂದು ಒತ್ತಾಯಿಸಿದರು. ಅಲ್ಲದೇ, ಯೋಗೇಶ್​​ಗೆ ಟಿಕೆಟ್ ನೀಡುವಂತೆ ಮೊಳಕಾಲ್ಮೂರು ಕ್ಷೇತ್ರದವರು ಅರೆನಗ್ನ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಇದನ್ನೂ ಓದಿ :ಜೆಡಿಎಸ್​​ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್​ ಕಾಂಗ್ರೆಸ್​ ಸೇರ್ಪಡೆ

Last Updated : Mar 30, 2023, 2:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.