ಬೆಂಗಳೂರು: ಇಂಧನ ಇಲಾಖೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ, ಜೊತೆಗೆ ಇಲಾಖೆಯ ಖಾಸಗೀಕರಣವನ್ನು ವಿರೋಧಿಸಿ ಫ್ರೀಡಂ ಪಾರ್ಕ್ ಬಳಿ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ರಾಜ್ಯ ಫೆಡರೇಷನ್ ಪ್ರತಿಭಟನೆ ನಡೆಸಿತು.
ಸಿಐಟಿಯು ಗೌರವಾಧ್ಯಕ್ಷೆ ವರಲಕ್ಷ್ಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಪದಾಧಿಕಾರಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸರ್ಕಾರ, ಇಂಧನ ಇಲಾಖೆಯಡಿ ಬರುವ ವಿದ್ಯುತ್ ಉತ್ಪಾದನೆ, ಪ್ರಸರಣ ಹಾಗೂ ವಿತರಣಾ ಕಂಪನಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಂಧನ ಇಲಾಖೆಯಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಕಾಯಂ ಮಾಡಬೇಕು, ಸೇವಾ ಜೇಷ್ಠತೆ ಕೃಪಾಂಕ ನೀಡಬೇಕು. ವರ್ಗಾವಣೆ, ಬಡ್ತಿ ಮತ್ತು ನೇರ ನೇಮಕಾತಿಯ ಹೆಸರಿನಲ್ಲಿ 15-20 ವರ್ಷಗಳಿಂದ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ರಕ್ಷಿಸಬೇಕೆಂಬುದು ಪ್ರಮುಖ ಬೇಡಿಕೆಗಳಾಗಿವೆ.
ಕನಿಷ್ಠ ವೇತನ 21 ಸಾವಿರಕ್ಕೆ ಹೆಚ್ಚಿಸಬೇಕು. ಕಾರ್ಮಿಕರ ಫೆಡರೇಷನ್ ಅಧ್ಯಕ್ಷ ಜೆ.ಸತ್ಯಬಾಬು ಬಳ್ಳಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಎಂ .ವಕುಮಾರ್ ಶಿವಕುಮಾರ್ ಉಪಸ್ಥಿತರಿದ್ದು, ಸರ್ಕಾರ ಹಾಗೂ ವಿದ್ಯುತ್ ಕಂಪನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.