ETV Bharat / state

ರಾಜಧಾನಿಯಲ್ಲಿ ರೈತರ ಪ್ರತಿಭಟನೆ.. ನಗರದ ಕೆಲ ರಸ್ತೆ ಬಂದ್​, ಸುತ್ತಲೂ ಟ್ರಾಫಿಕ್​ ಜಾಮ್​ - ಬೆಂಗಳೂರು ಟ್ರಾಫಿಕ್​

ಮೈಸೂರು ಬ್ಯಾಂಕ್ ಸರ್ಕಲ್, ಚಾಲುಕ್ಯ ಸರ್ಕಲ್ ಹಾಗೂ ರೇಸ್‌ಕೋರ್ಸ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಟ್ರಾಫಿಕ್ ಜಾಮ್​​ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ..

Traffic Jam
ಬೆಂಗಳೂರು ನಗರದಲ್ಲಿ ಉಂಟಾದ ಸಂಚಾರ ದಟ್ಟಣೆ
author img

By

Published : Sep 21, 2020, 4:48 PM IST

ಬೆಂಗಳೂರು : ರಾಜ್ಯದ ವಿವಿಧೆಡೆಯಿಂದ ರಾಜಧಾನಿಗೆ ಬಂದಿರುವ ರೈತರು, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಫ್ರೀಡಂ ಪಾರ್ಕ್ ಸುತ್ತಲಿನ ರಸ್ತೆಗಳಲ್ಲಿ ತೀವ್ರ ಟ್ರಾಫಿಕ್ ಜಾಮ್​ ಉಂಟಾಗಿದೆ.

ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ

ವಿವಿಧ ಜಿಲ್ಲೆಗಳಿಂದ ಟೆಂಪೋ, ಕಾರು, ಬಸ್‌ಗಳ ಮೂಲಕ ಬೆಂಗಳೂರಿಗೆ ಬಂದಿರುವ ರೈತರು, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ, ಮೆಜೆಸ್ಟಿಕ್​​, ಆನಂದ್ ರಾವ್ ಸರ್ಕಲ್, ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ, ಶೇಷಾದ್ರಿ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಇದರ ಪರಿಣಾಮ ಮೈಸೂರು ಬ್ಯಾಂಕ್ ಸರ್ಕಲ್, ಚಾಲುಕ್ಯ ಸರ್ಕಲ್ ಹಾಗೂ ರೇಸ್‌ಕೋರ್ಸ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಟ್ರಾಫಿಕ್ ಜಾಮ್​​ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ರೈತರು ನಡೆಸುತ್ತಿರುವ ಪ್ರತಿಭಟನೆಯಾಗಿದ್ದರಿಂದ ವಾಹನ ಸವಾರರು ತಾಳ್ಮೆಯಿಂದಲೇ ವಾಹನ ಚಲಾಯಿಸಿದ್ದು, ಇನ್ನೂ ಕೆಲ ಆಟೋಚಾಲಕರು ರೈತರಿಗೆ ಜೈ ಎಂದು ಘೋಷಣೆ ಕೂಗುತ್ತಾ ಸಾಗಿರುವ ದೃಶ್ಯ ಕಂಡು ಬಂತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.