ETV Bharat / state

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆ

Cauvery water dispute: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಇಂದು (ಶನಿವಾರ) ರಾಜ್ಯದ ವಿವಿಧೆಡೆ ರೈತಪರ ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

Cauvery water dispute
ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿರೋಧಿಸಿ ವಿವಿಧೆಡೆ ಪ್ರತಿಭಟನೆ...
author img

By ETV Bharat Karnataka Team

Published : Sep 23, 2023, 5:46 PM IST

Updated : Sep 23, 2023, 6:17 PM IST

ಬೆಂಗಳೂರಿನ ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.

ಬೆಂಗಳೂರು: ರಾಜ್ಯ ಬರದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ ಎನ್‌ ಜಗದೀಶ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

''ರಾಜ್ಯ ಸಂಕಷ್ಟದಲ್ಲಿ ಇದ್ದಾಗ ನೀರು ಬಿಡಬೇಡಿ, ಯಾವುದೇ ಸಮಸ್ಯೆಗೂ ಸರ್ಕಾರದೊಂದಿಗೆ ನಾವು ಇದ್ದೇವೆ ಎಂದರೂ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ರೈತರನ್ನು, ಕನ್ನಡಪರ ಸಂಘಟನೆಗಳನ್ನು ಹೊರಗಿಟ್ಟು ತೀರ್ಮಾನ ತೆಗೆದುಕೊಂಡಿದ್ದಾರೆ. ಯಾವುದೇ ಪಕ್ಷವೂ ಅಧಿಕಾರದಲ್ಲಿದ್ದಾಗ ರಾಜ್ಯದ ಪರ ನಿರ್ಧಾರ ಕೈಗೊಂಡಿಲ್ಲ. ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸುವುದನ್ನು ಬಿಟ್ಟು ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.

25 ಬಿಜೆಪಿ ಸಂಸದರು ಸ್ವಾಭಿಮಾನ ತೋರಿಸಬೇಕು. ಸರಿಯಾದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡದೇ ಇದ್ದಂತಹ ಅಧಿಕಾರಿಗಳು ಮತ್ತು ಕಾನೂನು ತಂಡದ ಮೇಲೆ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ ಪಕ್ಷ ತಮಿಳುನಾಡಿನ ತಮ್ಮ ಮಿತ್ರ ಪಕ್ಷವನ್ನು ಮನವೊಲಿಸಬಹುದಿತ್ತು. ಇವರೆಲ್ಲರೂ ಸೇರಿಕೊಂಡು ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ'' ಎಂದು ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ ಎನ್‌ ಜಗದೀಶ್‌ ಆರೋಪಿಸಿದರು.

''ಕನ್ನಡಪರ ಹಾಗೂ ರೈತ ಸಂಘಟನೆಗಳು ಸ್ವಾರ್ಥದಿಂದಲ್ಲ, ಅಭಿಮಾನದಿಂದ ಹೋರಾಟ ಮಾಡುತ್ತಿದ್ದೇವೆ. ಸುಗ್ರೀವಾಜ್ಞೆ ಮೂಲಕ ರಾಜ್ಯ ಸರಕಾರ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಈ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವ ನಿರ್ಧಾರ ಕೈಗೊಳ್ಳಬೇಕು. ಇಲ್ಲದೇ ಇದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದ ಜನಪ್ರತಿನಿಧಿಗಳ ಮನೆ ಮತ್ತು ಕಚೇರಿಗಳ ಮುಂದೆ ನಿರಂತರ ಧರಣಿ ಮಾಡಲಿದ್ದೇವೆ'' ಎಂದು ಜಯ ಕರ್ನಾಟಕ ಸಂಘಟನೆ ಎಚ್ಚರಿಕೆ ನೀಡಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಶಿವಮೊಗ್ಗದಲ್ಲಿ ಕರವೇ ಪ್ರತಿಭಟನೆ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಶಿವಮೊಗ್ಗದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ನಮಗೆ ಕುಡಿಯಲು ಸಹ ನೀರು ಇಲ್ಲದಂತಾಗುತ್ತದೆ. ಮಳೆಯ ಕೊರತೆಯಿಂದ ನೀರಿನ ಸಂಗ್ರಹ ಕುಸಿತ ಕಂಡಿದೆ. ಇದರಿಂದ ಬೆಂಗಳೂರು ಸೇರಿದಂತೆ ಮೈಸೂರು ಮಂಡ್ಯ ಜಿಲ್ಲೆಯ ಜನತೆಗೆ ಕುಡಿಯುವ ನೀರಿಗೂ ಸಹ ಸಮಸ್ಯೆ ಉಂಟಾಗಲಿದೆ. ಮಳೆ ಕೊರತೆಯಿಂದ ನಮ್ಮಲ್ಲಿಯೇ ನೀರಿನ ಸಂಗ್ರಹವಿಲ್ಲ‌ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಬಳಿಕ ಕಾವೇರಿ ಪ್ರಾಧಿಕಾರದ‌ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಸಂಘಟನೆಯ ಜಿಲ್ಲಾಧ್ಯಕ್ಷ‌‌ ಮಜುನಾಥ ಕೊಟ್ಯಾನ್ ಮಾತನಾಡಿ, ''ನಮ್ಮಲ್ಲಿಯೇ ಕುಡಿಯಲು ನೀರಿಲ್ಲ. ಆದ್ರೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ರಾಜ್ಯದ ಜನರ ಹಿತದೃಷಷ್ಟಿಯಿಂದ ನೀರು ಹಂಚಿಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ, ಸರಣಿ ಪ್ರತಿಭಟನೆ : ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿರೋಧಿಸಿ ಚಾಮರಾಜನಗರ ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆಗಳು ನಡೆದವು. ಶನಿವಾರ ಮಧ್ಯಾಹ್ನ ರೈತ ಸಂಘಟನೆಯ ಕಾರ್ಯಕರ್ತರು ಚಾಮರಾಜನಗರ- ಕೊಳ್ಳೇಗಾಲ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

''ಕಾವೇರಿ ನೀರಿನ ಸಂಬಂಧ ಮಂಡ್ಯ ಬಂದ್ ಮಾಡಲಾಗಿದ್ದು, ಅದರಂತೆ ಚಾಮರಾಜನಗರವನ್ನು ಕೂಡ ಬಂದ್ ಮಾಡುತ್ತೇವೆ. ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸದೇ ಇದ್ದರೇ ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಜೊತೆ ಸಭೆಸೇರಿ ಚಾಮರಾಜನಗರ ಬಂದ್ ಮಾಡಲಾಗುತ್ತದೆ'' ಎಂದು ರೈತ ಮುಖಂಡ ಹೆಬ್ಬಸೂರು ಬಸವಣ್ಣ ಎಚ್ಚರಿಕೆ ನೀಡಿದ್ದಾರೆ.

ಜೊತೆಗೆ ಕನ್ನಡಪರ ಸಂಘಟನೆಗಳು ಉರುಳು ಸೇವೆ ಮಾಡಿ ಆಕ್ರೋಶ ಹೊರಹಾಕಿದರು. ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ. ಶ್ರೀನಿವಾಸಗೌಡ, ಶಾ. ಮುರುಳಿ ಹಾಗೂ ಇನ್ನಿತರರು ಅರೆ ಬೆತ್ತಲೆಯಾಗಿ ರಸ್ತೆಯಲ್ಲಿ ಉರುಳು ಸೇವೆ ಮಾಡಿ ಧಿಕ್ಕಾರ ಕೂಗಿದರು. ರಸ್ತೆ ತಡೆ ನಡೆಸಿದ್ದರಿಂದ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಕಬ್ಬು ಬೆಳೆಗಾರರು, ರಾಷ್ಟ್ರೀಯ ಹೆದ್ದಾರಿ ಸಮೀಪದ ಭುವನೇಶ್ವರಿ ವೃತ್ತದಲ್ಲಿ ಸಂಸದ ಜಗ್ಗೇಶ್, ರಾಜೀವ್ ಚಂದ್ರಶೇಖರ್, ನಿರ್ಮಲಾ ಸೀತಾರಾಮನ್ ಹಾಗೂ ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸೋಕೆ ಬರೊಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Last Updated : Sep 23, 2023, 6:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.