ಬೆಂಗಳೂರು: ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವೂ ನೌಕರರಿಗೆ ಸೇವಾ ವಿಮಾ ಸೌಲಭ್ಯ ಒದಗಿಸುವಂತೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.
ಕೋವಿಡ್ -19 ಸಂಬಂಧ ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಸರ್ಕಾರಿ ನೌಕರರು ಕಾರ್ಯನಿರ್ವಹಿಸ್ತಿದ್ದಾರೆ. ನಿರಂತರವಾಗಿ ಸರ್ಕಾರದ ಆದೇಶಗಳನ್ನ ತಪ್ಪದೇ ಪಾಲಿಸ್ತಿದ್ದಾರೆ. ಈ ಎಲ್ಲಾ ಅಧಿಕಾರಿ, ನೌಕರರಿಗೆ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ 50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವಂತೆ ಕೋರಿ ಪತ್ರ ಬರೆದಿದ್ದಾರೆ.