ಬೆಂಗಳೂರು: ವಿಧಾನ ಸೌಧದಲ್ಲಿ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಹಾಗೂ ಸರ್ಕಾರದ ನಡುವೆ ಸಭೆ ನಡೆದಿದ್ದು, ಶೇ 75 ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ನೀಡಬೇಕು ಎಂದು ಎಚ್ಚರಿಕೆ ನೀಡಲಾಯಿತು.
ವಿಧಾನ ಸೌಧದ ಕಾನ್ಫರೆನ್ಸ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ನಗರದ 12 ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಸಚಿವ ಡಾ. ಸುಧಾಕರ್ ಉಪಸ್ಥಿತರಿದ್ದಾರೆ.
ದಯಾನಂದ್ ಮೆಡಿಕಲ್ ಕಾಲೇಜು ಮತ್ತು ಸಿದ್ದಾರ್ಥ ಮೆಡಿಕಲ್ ಕಾಲೇಜು ಮುಖ್ಯಸ್ಥರು ಸಭೆಗೆ ಗೈರಾಗಿದ್ದು, ಎರಡೂ ಅಸ್ಪತ್ರೆಗಳಿಗೆ ನೋಟಿಸ್ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದ್ದಾರೆ.
ನಿನ್ನೆ ‘ಈಟಿವಿ ಭಾರತ’ ಖಾಸಗಿ ಶಿಕ್ಷಣ ಸಂಸ್ಥೆಗಳು ಇನ್ನೂ 3,500 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಸರ್ಕಾರಕ್ಕೆ ನೀಡಬೇಕು ಎಂಬ ಸುದ್ದಿ ಬಿತ್ತರಿಸಿತ್ತು. ಈಗ ಆರೋಗ್ಯ ಇಲಾಖೆ ವೈದ್ಯಕೀಯ ಶಿಕ್ಷಣ ಸಂಸ್ಥೆ ಜೊತೆ ಸಭೆ ನಡೆಸಿ ಹಾಸಿಗೆ ನೀಡುವ ಬಗ್ಗೆ ಮಾತನ್ನಾಡಿದ್ದಾರೆ.
ಇದನ್ನೂ ಓದಿ: ರೋಗಿಗಳು ನರಳುತ್ತಿದ್ದರೂ 3500 ಬೆಡ್ಗಳನ್ನು ಸರ್ಕಾರಕ್ಕೆ ನೀಡದ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು..