ETV Bharat / state

ಪ್ರತಿಪಕ್ಷವಾಗಿ ಸೈದ್ಧಾಂತಿಕ ಸಂಘರ್ಷವಿದ್ದರೂ ಅಭಿವೃದ್ಧಿಯ ವಿಚಾರದಲ್ಲಿ ತಂಡವಾಗಿ ಕೆಲಸ ಮಾಡೋಣ: ಸಿದ್ದರಾಮಯ್ಯ - Siddaramaiah statement

ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ತಾರತಮ್ಯ ಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂಬುದು ನನ್ನ ಸಲಹೆ - ವಿಪಕ್ಷ ನಾಯಕ ಸಿದ್ದರಾಮಯ್ಯ.

siddaramaiah and Basavaraj Bommai
ಸಿದ್ದರಾಮಯ್ಯ ಹಾಗು ಬಸವರಾಜ್ ಬೊಮ್ಮಾಯಿ
author img

By

Published : Jul 28, 2021, 3:30 PM IST

ಬೆಂಗಳೂರು: ಜವಾಬ್ದಾರಿಯುತ ಪ್ರತಿಪಕ್ಷವಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡ ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಅವಕಾಶವನ್ನು ಸಂವಿಧಾನ ಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರಿಗೆ ಹಾರ್ದಿಕ ಅಭಿನಂದನೆಗಳು.

ಕಳೆದ 2 ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದಿದ್ದಾರೆ.

ರಾಜ್ಯಕ್ಕೆ ನ್ಯಾಯ ಒದಗಿಸಿ

ಬರ ಪರಿಹಾರ, ಜಿಎಸ್​​ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ತಾರತಮ್ಯ ಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂಬುದು ನನ್ನ ಸಲಹೆ.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತ ಚರ್ಚೆ-ಸಂವಾದಗಳೇ ನಿಂತು ಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಂಡವಾಗಿ ಕೆಲಸ ಮಾಡೋಣ

ಪ್ರಧಾನ ಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ. ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ಪ್ರತಿಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸ ಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ.

ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೊಸ ಶಿಷ್ಯವೇತನ ಘೋಷಿಸಿದ ನೂತನ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.