ETV Bharat / state

ಪಿಎಸ್ಐ ಪರೀಕ್ಷಾ ಹಗರಣ: ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ

ಬೆಂಗಳೂರಿನ 7 ಪರೀಕ್ಷಾ ಕೇಂದ್ರಗಳಲ್ಲಿ 172 ಅಭ್ಯರ್ಥಿಗಳು ಆಯ್ಕೆ ಆಗಿದ್ದರು. ಇದರಲ್ಲಿ ಜಾಗೃತ್‌ ಎಸ್, ಗಜೇಂದ್ರ ಬಿ, ಸೋಮನಾಥ್ ಮಲ್ಲಿಕಾರ್ಜುನಯ್ಯ ಹಿರೇಮಠ್, ರಘುವೀರ್ ಹೆಚ್. ಯು, ಚೇತನ್ ಕುಮಾರ್ ಎಂ. ಸಿ, ರಚನಾ ಹನುಮಂತ ಸೇರಿದಂತೆ ಒಟ್ಟು 22 ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆ ಮಾಡಲಾಗುತ್ತಿದೆ.

ಬೆಂಗಳೂರಲ್ಲಿ ಪಿಎಸ್​ಐ ಪರೀಕ್ಷೆ ಹಗರಣದ ಬಗ್ಗೆ ಮುಂದುವರೆದ ಪ್ರತಿಭಟನೆ

author img

By

Published : May 2, 2022, 8:33 PM IST

ಬೆಂಗಳೂರು: ಪಿಎಸ್ಐ ಹಗರಣದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಒಂದೆಡೆ ಅಭ್ಯರ್ಥಿಗಳು ಪ್ರತಿಭಟನೆ ಮಾಡುತ್ತಿದ್ದರೆ ಇನ್ನೊಂದೆಡೆ 22 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ 7 ಪರೀಕ್ಷಾ ಕೇಂದ್ರಗಳಲ್ಲಿ 172 ಅಭ್ಯರ್ಥಿಗಳು ಆಯ್ಕೆ ಆಗಿದ್ದರು. ಇದರಲ್ಲಿ 22 ಅಭ್ಯರ್ಥಿಗಳ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿದೆ. ತನಿಖೆ ಮುಂದುವರಿದಂತೆ ಅಭ್ಯರ್ಥಿಗಳ ವಿರುದ್ಧ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಬೆಂಗಳೂರಲ್ಲಿ ಪಿಎಸ್​ಐ ಪರೀಕ್ಷೆ ಹಗರಣದ ಬಗ್ಗೆ ಮುಂದುವರೆದ ಪ್ರತಿಭಟನೆ

ಜಾಗೃತ್‌ ಎಸ್, ಗಜೇಂದ್ರ ಬಿ, ಸೋಮನಾಥ್ ಮಲ್ಲಿಕಾರ್ಜುನಯ್ಯ ಹಿರೇಮಠ್, ರಘುವೀರ್ ಹೆಚ್. ಯು, ಚೇತನ್ ಕುಮಾರ್ ಎಂ. ಸಿ, ರಚನಾ ಹನುಮಂತ ಸೇರಿದಂತೆ ಒಟ್ಟು 22 ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆ ಮಾಡಲಾಗುತ್ತಿದೆ. ಈವರೆಗೆ ಒಟ್ಟು 12 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ತಲೆ ಮರೆಸಿಕೊಂಡಿದ್ದು, ಅವರನ್ನು ಹುಡುಕುವ ಕಾರ್ಯ ಮುಂದುವರೆದಿದೆ.

3ನೇ ದಿನಕ್ಕೆ ನಗರಕ್ಕೆ ಕಾಲಿಟ್ಟ ಅಭ್ಯರ್ಥಿಗಳ ಪ್ರತಿಭಟನೆ: 3ನೇ ದಿನಕ್ಕೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅಭ್ಯರ್ಥಿಗಳ ಪ್ರತಿಭಟನೆ ಮುಂದುವರೆದಿದ್ದು, ಸೋಮವಾರವೂ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿತ್ತು. ಸರ್ಕಾರ ನಿರ್ಧಾರ ಬದಲಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಅಭ್ಯರ್ಥಿಗಳು ಪಟ್ಟು ಹಿಡಿದು ಕೂತಿದ್ದಾರೆ. ಇನ್ನು ಈ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕೆಲವು ಅಭ್ಯರ್ಥಿಗಳು ಅಕ್ರಮ ಪರೀಕ್ಷಾ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದು, ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಲಾಗಿದೆ.

ಓದಿ: ಬಡವರಿಗೆ ಸೇರಬೇಕಾದ ಅಕ್ಕಿ ಗೋಲ್ಮಾಲ್ ; ದಂಧೆಕೋರರ ಪ್ಲಾನ್ ಉಲ್ಟಾ ಮಾಡಿದ ಅಧಿಕಾರಿಗಳು!

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.