ಬೆಂಗಳೂರು: ಪಿಎಸ್ಐ ನೇಮಕಾತಿಗೆ ಹೊರಡಿಸಿರುವ ಮರುಪರೀಕ್ಷೆ ಆದೇಶ ಹಿಂಪಡೆದು, ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಪಿಎಸ್ಐ ಅಭ್ಯರ್ಥಿಗಳು ಇಂದು ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಪರೀಕ್ಷಾ ಪ್ರಕ್ರಿಯೆಯಲ್ಲಿ ಅವ್ಯವಹಾರ ಕಂಡು ಬಂದ ಹಿನ್ನೆಲೆ ಸರ್ಕಾರ ಮರುಪರೀಕ್ಷೆಗೆ ಆದೇಶ ನೀಡಿತ್ತು. ಈ ಬಗ್ಗೆ ಪಿಎಸ್ಐ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ಇದು ಸಮಂಜಸವಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ನಾವು ಬಡ ಕುಟುಂಬದವರು, ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೇವೆ. ಸರ್ಕಾರ ನಮಗೆ ಅನ್ಯಾಯ ಮಾಡಬಾರದು ಎಂದು ಪ್ರತಿಭಟನಾನಿರತ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.
ಇದನ್ನೂ ಓದಿ :ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ: ಬೆಂಗಳೂರು, ಗುಜರಾತ್ ಸೇರಿ 33 ಸ್ಥಳಗಳಲ್ಲಿ ಸಿಬಿಐ ದಾಳಿ