ETV Bharat / state

ಗೃಹ ಸಚಿವರ ವಜಾ ಕೋರಿ ರಾಜ್ಯಪಾಲರಿಗೆ ಆಪ್ ಮನವಿ - PSI exam illegal

ಪಿಎಸ್‌ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದ್ದಾರೆ. ಅಲ್ಲದೇ ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಸಾಮರ್ಥ್ಯ ಹಾಗೂ ಅನುಭವದ ಕೊರತೆಯಿರುವುದು ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಿಂದಲೂ ಸಾಬೀತಾಗುತ್ತಿದೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ಎಂದು ಆಗ್ರಹಿಸಿದ್ದಾರೆ.

Appeal to governor for dismissal of home minister
ಗೃಹ ಸಚಿವರನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಆಪ್​ನಿಂದ ಮನವಿ
author img

By

Published : Apr 26, 2022, 5:51 PM IST

Updated : Apr 26, 2022, 6:54 PM IST

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದ್ದಾರೆ. ಅಲ್ಲದೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ನಿಯೋಗದಲ್ಲಿ ಪಕ್ಷದ ಹಿರಿಯ ಮುಖಂಡ ಭಾಸ್ಕರ್ ರಾವ್ ಹಾಗೂ ಪಕ್ಷದ ಅನೇಕ ಮುಖಂಡರುಗಳು ಇದ್ದರು.

ಗೃಹ ಸಚಿವರ ವಜಾ ಕೋರಿ ರಾಜ್ಯಪಾಲರಿಗೆ ಆಪ್ ಮನವಿ

ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಮಂಗಳವಾರ ಭೇಟಿ ಮಾಡಿದ ಪೃಥ್ವಿ ರೆಡ್ಡಿ ಮೂರು ಆಗ್ರಹಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿದರು. ಇವುಗಳನ್ನು ಶೀಘ್ರ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಮನವಿ ಮಾಡಿದರು. ಮೊದಲನೆಯದಾಗಿ, ರಾಜ್ಯದ 52,000 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆದಿದ್ದಾರೆ. ಈಗ ಅಕ್ರಮ ಬಯಲಾಗಿರುವ ಹಿನ್ನೆಲೆ ಅಭ್ಯರ್ಥಿಗಳನ್ನು ಕಾಯಿಸದೇ ಶೀಘ್ರವೇ ಮರುಪರೀಕ್ಷೆ ನಡೆಸಬೇಕಾದ ಅವಶ್ಯಕತೆಯಿದೆ. ಇದಕ್ಕಾಗಿ ನೂತನ ಪ್ರಾಧಿಕಾರ ರಚಿಸಿ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ ವಿನಂತಿಸಿದರು.

ಸಿಐಡಿ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ: ಪಿಎಸ್‌ಐ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ಸಿಐಡಿ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಅಲ್ಲದೇ, ರಾಜ್ಯ ಸರ್ಕಾರವು ತನ್ನ ಪ್ರಭಾವ ಬಳಸಿ ತನಿಖೆಯು ವಿಳಂಬವಾಗುವಂತೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ತನಿಖೆಗೆ ಕಾಲಮಿತಿ ನಿಗದಿಪಡಿಸಬೇಕು. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಆರೋಪಪಟ್ಟಿ ಸಲ್ಲಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ ಮನವಿ ಮಾಡಿದರು.

ಇದನ್ನೂ ಓದಿ: ಪಿಎಸ್ಐ ಅಕ್ರಮ ನೇಮಕಾತಿ: ಮತ್ತೋರ್ವ ಅಭ್ಯರ್ಥಿ ಬಂಧಿಸಿದ ಸಿಐಡಿ

ಆರಗ ಜ್ಞಾನೇಂದ್ರರಿಗೆ ಅನುಭವದ ಕೊರತೆ: ರಾಜ್ಯ ಸಚಿವ ಸಂಪುಟದಲ್ಲಿ ಗೃಹ ಇಲಾಖೆಯು ಅತ್ಯಂತ ಸೂಕ್ಷ್ಮವಾದ ಇಲಾಖೆಯಾಗಿದೆ. ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಸಾಮರ್ಥ್ಯ ಹಾಗೂ ಅನುಭವದ ಕೊರತೆಯಿರುವುದು ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಿಂದಲೂ ಸಾಬೀತಾಗುತ್ತಿದೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ಸಮರ್ಥರನ್ನು ಗೃಹ ಸಚಿವ ಸ್ಥಾನಕ್ಕೆ ನೇಮಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಭಾಸ್ಕರ್ ರಾವ್ ಕೇಳಿಕೊಂಡರು.

Last Updated : Apr 26, 2022, 6:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.