ಬೆಂಗಳೂರು: ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ ಯುವತಿಯ ಮರಣೋತ್ತರ ಪರೀಕ್ಷೆಗೆ ಶುಲ್ಕ ಭರಿಸಲು ಪರದಾಡುತ್ತಿದ್ದ ಕುಟುಂಬಕ್ಕೆ ಸಹಾಯ ಮಾಡುವ ಮೂಲಕ ಬ್ಯಾಡರಹಳ್ಳಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಾನವೀಯತೆ ಮೆರೆದಿದ್ದಾರೆ.
ಪಿಎಸ್ಐ ವಸೀಂ ಉಲ್ಲಾ 14 ಸಾವಿರ ರೂಪಾಯಿ ನೀಡಿ ಮೃತ ಯುವತಿಯ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ.
ಇದನ್ನೂ ಓದಿರಿ: ಕಾಲೇಜು ಶುಲ್ಕ ಕಟ್ಟಲು ಬಂದ ಯುವತಿ ಮೇಲೆ ಅತ್ಯಾಚಾರ: ಕೊಲೆ
ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ಯ ರಾಜ್ಯದ ಯುವತಿಯನ್ನು ರೂಮ್ಗೆ ಕರೆಸಿಕೊಂಡು ಸ್ನೇಹಿತನೇ ಆತ್ಯಾಚಾರ ಎಸಗಿದ್ದ. ಈ ವೇಳೆ ಆಕೆ ಸಾವನ್ನಪ್ಪಿದ್ದಳು. ಈ ಸಂಬಂಧ ಆರೋಪಿಯನ್ನು ಬಂಧಿಸಿ ಮೃತ ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು.
ಈ ವೇಳೆ ಪೋಷಕರಿಗೆ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಸಾಗಿಸಲು ಹಣದ ಅಭಾವ ಇದ್ದಿದ್ದರಿಂದ ಸಬ್ ಇನ್ಸ್ಪೆಕ್ಟರ್ ಕರ್ತವ್ಯಕ್ಕೂ ಮೀರಿ 14 ಸಾವಿರಕ್ಕೂ ಹೆಚ್ಚು ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ.