ETV Bharat / state

ಪಿಎಸ್‌ಐ ನೇಮಕಾತಿ: ಅರ್ಜಿ ವಿಚಾರಣೆ ಆ.16 ಕ್ಕೆ ಮುಂದೂಡಿದ ಹೈಕೋರ್ಟ್ - ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ

ಪಿಎಸ್‌ಐ ಮರು ಪರೀಕ್ಷೆ ರದ್ದು ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್​ 16 ಕ್ಕೆ ಮುಂದೂಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Aug 8, 2023, 9:00 AM IST

ಬೆಂಗಳೂರು: ಪೊಲೀಸ್ ಸಬ್ ಇನ್ಸ್​​​​ಪೆಕ್ಟರ್​​ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆ.16ಕ್ಕೆ ಮುಂದೂಡಿದೆ.
ಎನ್.ವಿ. ಚಂದನ್​ ಸೇರಿದಂತೆ ಆಯ್ಕೆಪಟ್ಟಿಯಲ್ಲಿದ್ದ 100 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿಗಳು ನ್ಯಾಯಮೂರ್ತಿಗಳಾದ ಪಿ.ಎಸ್. ದಿನೇಶ್ ಕುಮಾರ್ ಹಾಗೂ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮತ್ತೊಂದೆಡೆ ರಾಜ್ಯ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು ಅರ್ಜಿಯನ್ನು ಆ.16 ರಂದು ವಿಚಾರಣೆಗೆ ನಿಗದಿಪಡಿಸಬಹುದು ಎಂದು ತಿಳಿಸಿದರು. ಆ ಮನವಿಗೆ ಒಪ್ಪಿದ ನ್ಯಾಯಪೀಠ ವಿಚಾರಣೆಯನ್ನು ಆ.16ಕ್ಕೆ ಮುಂದೂಡಿತಲ್ಲದೇ, ಅಂದು ಅರ್ಜಿಗೆ ಸಂಬಂಧಿಸಿದ ಎಲ್ಲ ಪಕ್ಷಗಾರರು ವಾದ ಮಂಡನೆಗೆ ಸಿದ್ಧವಾಗಿರಬೇಕು ಎಂದು ಮೌಖಿಕವಾಗಿ ಸೂಚಿಸಿತು.

ಪ್ರಕರಣದ ಹಿನ್ನೆಲೆ: ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಹಿಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು 2022ರ ಜು.19 ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.28 ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಅಂಗವಿಕಲತೆ ಗುರುತಿಸದ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 6 ರಲ್ಲಿ (ಎನ್‌ಎಫ್‌ಎಚ್‌ಎಸ್-6) ಯಾವ ಯಾವ ರೀತಿಯ ಅಂಗವಿಕಲತೆ ಇದೆ ಎಂಬುದನ್ನು ಗುರುತಿಸುವುದಕ್ಕೆ ಮುಂದಾಗಿಲ್ಲ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.

ಜಾವೇದ್ ಅಬಿದಿ ಪ್ರತಿಷ್ಠಾನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಅರ್ಜಿದಾರರ ಮನವಿ ಏನು ?: ರಾಜ್ಯದ ವಿವಿಧ ಸುದ್ದಿ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಎನ್‌ಎಫ್‌ಎಚ್‌ಎಸ್-6ರಲ್ಲಿ ಅಂಗವಿಕಲರನ್ನು ಹೊರಗಿಡಲಾಗಿದೆ. ಗಣತಿದಾರರಿಗೆ ಅಂಗವೈಕಲ್ಯದ ಬಗ್ಗೆ ಕೇಳಲು, ಮೌಲ್ಯಮಾಪನ ಮಾಡಲು ತರಬೇತಿ ಅಥವಾ ಅರ್ಹತೆ ಇಲ್ಲ. ಹೀಗಾಗಿ, ಅಂಗವಿಕಲರ ಹಕ್ಕುಗಳ ಕಾಯ್ದೆ (ಆರ್ಪಿಡಬ್ಲ್ಯುಡಿ)?2016ರ ವೇಳಾಪಟ್ಟಿಯಲ್ಲಿ ಉಲ್ಲೇಖಿಸಲಾದ 21 ಅಂಗವೈಕಲ್ಯಗಳನ್ನು ಎನ್‌ಎಫ್‌ಎಚ್‌ಎಸ್-6ರ ಪ್ರಶ್ನಾವಳಿಯಲ್ಲಿ ಸೇರ್ಪಡೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: ಕೋವಿಡ್​ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಕೃಷಿ ಸಚಿವರ ವಿರುದ್ಧ ದಾಖಲಾದ ಪ್ರಕರಣ ರದ್ದು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.