ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಪ್ರಕರಣದಿಂದಾಗಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೂ ಇದೀಗ ಸಂಕಷ್ಟ ಎದುರಾಗಿದೆ. ಕೇವಲ ಕಲಬುರಗಿ ಮಾತ್ರವಲ್ಲದೇ ರಾಜ್ಯದ ಹಲವು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿ 545 ಅಭ್ಯರ್ಥಿಗಳ ಪೈಕಿ ಟಾಪರ್ಸ್ ಆಗಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್ ಜಾರಿ ಮಾಡಿದೆ.
ಮೊದಲ 50 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್ ನೀಡಿದ್ದು, ಏಪ್ರಿಲ್ 20ರಂದು ಬೆಂಗಳೂರಿನ ಸಿಐಡಿಗೆ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈಗಾಗಲೇ ಒಂದಷ್ಟು ದಾಖಲಾತಿಗಳನ್ನು ಕಲೆಹಾಕಿರುವ ಸಿಐಡಿ ಅಧಿಕಾರಿಗಳಿಗೆ ಮೊದಲ 50 ಅಭ್ಯರ್ಥಿಗಳಲ್ಲಿ ಸಾಕಷ್ಟು ಅಭ್ಯರ್ಥಿಗಳು ವಾಮಮಾರ್ಗದಲ್ಲಿ ಉತ್ತೀರ್ಣರಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಸಲು ಮುಂದಾಗಿದ್ದಾರೆ.
ಇದನ್ನೂ ಓದಿ: ಬುಲೆರೋ ವಾಹನ ಹರಿದು ಯುವಕ ಸಾವು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ