ETV Bharat / state

ಪಿಎಸ್ಐ ಹಗರಣ: ರುದ್ರಗೌಡ ಪಾಟೀಲ್ ಮನವಿ ತಿರಸ್ಕರಿಸಿದ ಹೈಕೋರ್ಟ್

ಪಿಎಸ್‌ಐ ಹಗರಣದಲ್ಲಿ ವಿವಿಧೆಡೆ ದಾಖಲಾಗಿರುವ 11 ಪ್ರಕರಣಗಳನ್ನು ಒಟ್ಟಾಗಿಸುವಂತೆ ಕೋರಿ ಆರೋಪಿ ಆರ್.ಡಿ.ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ.

PSI recruitment exam illegal High Court rejected Rudragowda Patil's appeal
ಪಿಎಸ್ಐ ಹಗರಣ: ರುದ್ರಗೌಡ ಪಾಟೀಲ್ ಮನವಿ ತಿರಸ್ಕರಿಸಿದ ಹೈಕೋರ್ಟ್
author img

By ETV Bharat Karnataka Team

Published : Dec 8, 2023, 6:29 PM IST

ಬೆಂಗಳೂರು: ಪೊಲೀಸ್ ಸಬ್ ಇನ್​ಸ್ಪೆಕ್ಟರ್​ (ಪಿಎಸ್‌ಐ) ನೇಮಕಾತಿ ಹಗರಣದ ವಿವಿಧ ಆರೋಪಗಳಲ್ಲಿ ದಾಖಲಾಗಿರುವ ಹನ್ನೊಂದು ಎಫ್​ಐಆರ್​ ಮತ್ತು ಆರೋಪ ಪಟ್ಟಿಯನ್ನು ವಿಲೀನಗೊಳಿಸುವಂತೆ ಕೋರಿ ಪ್ರಕರಣದ ಪ್ರಮುಖ ಆರೋಪಿ ಹಾಗೂ ಅಫಜಲಪುರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ.ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿತು.

ಕಲಬುರಗಿ, ಬೆಂಗಳೂರು, ಧಾರವಾಡ ಮತ್ತು ತುಮಕೂರಿನ ವಿವಿಧ ಠಾಣೆಗಳಲ್ಲಿ ವಿವಿಧ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ದಾಖಲಾಗಿರುವ 11 ಎಫ್ಐಆರ್ ಹಾಗೂ ಆರೋಪ ಪಟ್ಟಿ ಒಟ್ಟಾಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ಪ್ರಕಟಿಸಿದೆ.

ಇದರೊಂದಿಗೆ ಆರ್‌.ಡಿ.ಪಾಟೀಲ್‌ ವಿರುದ್ಧದ ಎಫ್ಐಆರ್‌ಗಳಿಗೆ ತಡೆಯಾಜ್ಞೆ ವಿಧಿಸಿ ಹೈಕೋರ್ಟ್ 2023ರ ಏಪ್ರಿಲ್ 17ರಂದು ಮಾಡಿದ್ದ ಮಧ್ಯಂತರ ಆದೇಶವು ತೆರವಾಗಿದೆ. ಪ್ರಕರಣದ ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಕಲಬುರಗಿ ನಗರದ ಅಶೋಕ್‌ ನಗರ ಠಾಣೆಯಲ್ಲಿ ಐದು, ಸ್ಟೇಷನ್‌ ಬಜಾರ್‌ ಠಾಣೆಯಲ್ಲಿ ಎರಡು, ಚೌಕ್‌ ಠಾಣೆಯಲ್ಲಿ ಒಂದು ಹಾಗೂ ಧಾರವಾಡದ ಸಬ್‌ ಅರ್ಬನ್, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಎಫ್‌ಐಆರ್ ಮತ್ತು ಆರೋಪ ಪಟ್ಟಿಯನ್ನು ಒಟ್ಟಾಗಿಸಬೇಕು ಎಂದು ಆರ್‌.ಡಿ ಪಾಟೀಲ್‌ ಅರ್ಜಿಯಲ್ಲಿ ಕೋರಿದ್ದರು.

ವಿಚಾರಣೆ ವೇಳೆ ಸರ್ಕಾರದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎನ್.ಜಗದೀಶ್ವಿ ವಿರುದ್ಧ ದಾಖಲಿಸಿರುವ ಎಫ್​ಐಆರ್​ಗಳಲ್ಲಿ ಅಪರಾಧ ಕೃತ್ಯಗಳು ಬೇರೆ ಬೇರೆ ಇವೆ. ಅಪರಾಧ ವರದಿಯಾಗಿರುವ ಸ್ಥಳವೂ ಬೇರೆ ಬೇರೆಯಾಗಿದೆ. ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳೂ ಬೇರೆ ಬೇರೆಯಾಗಿದ್ದಾರೆ. ಆರ್.ಡಿ.ಪಾಟೀಲ್ ಎಲ್ಲಾ ಪ್ರಕರಣಗಳಲ್ಲಿ ಇದ್ದಾರೆ ಎಂದ ಮಾತ್ರಕ್ಕೆ ಎಲ್ಲವನ್ನೂ ಒಂದೇ ಪ್ರಕರಣವನ್ನಾಗಿ ಮಾಡಲಾಗದು. ನಾಲ್ಕು ಜಿಲ್ಲೆಗಳಲ್ಲಿ ಆರೋಪಿಯ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ವಾದಿಸಿದ್ದರು.

ಅರ್ಜಿದಾರರ ಪರ ವಕೀಲ, ಆರ್.ಡಿ.ಪಾಟೀಲ್ ವಿರುದ್ಧ ಬೇರೆ ಬೇರೆ ಕಡೆ ದಾಖಲಾಗಿರುವ ಎಫ್​ಐಆರ್​ಗಳು ಒಂದೇ ಪರೀಕ್ಷೆಗೆ ಸಂಬಂಧಿಸಿವೆ. ಇವೆಲ್ಲವೂ ಒಂದೇ ಅಪರಾಧವಾಗಿರುವುದರಿಂದ ಪ್ರತ್ಯೇಕ ಎಫ್ಐಆರ್ ಅಗತ್ಯವಿಲ್ಲ ಎಂದು ವಾದಿಸಿದ್ದರು. ಇದನ್ನು ನ್ಯಾಯಾಲಯ ಪುರಸ್ಕರಿಸಿಲ್ಲ.

ಇದನ್ನೂ ಓದಿ: ಪಿಎಸ್ಐ ಅಕ್ರಮ: ರುದ್ರಗೌಡ ಪಾಟೀಲ್, ಮಲ್ಲಿಕಾರ್ಜುನ ಪಾಟೀಲ್‌ಗೆ 13 ದಿನ ಸಿಐಡಿ ಕಸ್ಟಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.