ETV Bharat / state

ವೈಜ್ಞಾನಿವಾಗಿ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗೆ ಜನ ಜಾಗೃತಿ: ಸಚಿವ ಈಶ್ವರ ಖಂಡ್ರೆ

Re Commerce Expo 2023: ಬೆಂಗಳೂರಿನಲ್ಲಿ ಇಂದು ದುರಸ್ತಿ, ನವೀಕರಣ ಮತ್ತು ಮರು ಸಂಸ್ಕರಣೆ ಕುರಿತಂತೆ ಕರಡು ಕಾರ್ಯಸೂಚಿ ಸಿದ್ಧಪಡಿಸಲು ಆಯೋಜಿಸಿರುವ ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ- 2023 ಅನ್ನು ಸಚಿವ ಈಶ್ವರ್‌ ಖಂಡ್ರೆ ಉದ್ಘಾಟಿಸಿದರು.

Minister Ishwar Khandre
ವೈಜ್ಞಾನಿವಾಗಿ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗಾಗಿ ಜನ ಜಾಗೃತಿ: ಸಚಿವ ಈಶ್ವರ ಖಂಡ್ರೆ
author img

By

Published : Aug 9, 2023, 7:14 PM IST

ಬೆಂಗಳೂರು: ''ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ (Extended producer Responsibility act) ಇದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಜನಜಾಗೃತಿ ಮೂಡಿಸಲಿದೆ'' ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ದುರಸ್ತಿ, ನವೀಕರಣ ಮತ್ತು ಮರು ಸಂಸ್ಕರಣೆ ಕುರಿತಂತೆ ಕರಡು ಕಾರ್ಯಸೂಚಿ ಸಿದ್ಧಪಡಿಸಲು ಆಯೋಜಿಸಿರುವ ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ-2023 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಮರು ಸಂಸ್ಕರಣೆ ಮಾಡುವುದು ಕೈಗಾರಿಕೆಗಳ ಜವಾಬ್ದಾರಿ. ಈ ಕುರಿತು ಅಸ್ತಿತ್ವದಲ್ಲಿರುವ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಎಲ್ಲಾ ಪಾಲುದಾರರನ್ನು ವಿಶ್ವಾಸಕ್ಕೆ ಪಡೆದು ಅರಿವು ಮೂಡಿಸಲಾಗುವುದು'' ಎಂದರು.

Minister Ishwar Khandre
ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ- 2023 ಅನ್ನು ಸಚಿವ ಈಶ್ವರ್‌ ಖಂಡ್ರೆ ಉದ್ಘಾಟಿಸಿದರು

ಇ- ತ್ಯಾಜ್ಯ ನಿವಾರಣೆ ಅತ್ಯಂತ ಮಹತ್ವ: ''ಬೆಂಗಳೂರು ಜಾಗತಿಕ ಐಟಿ ರಾಜಧಾನಿಯಾಗಿದ್ದು, ಇಲ್ಲಿ ಉತ್ಪಾದನೆಯಾಗುವ ಇ- ತ್ಯಾಜ್ಯ ನಿವಾರಣೆ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಸರಿಯಾಗಿ ನಿರ್ವಹಿಸದಿದ್ದರೆ, ಸಾಕಷ್ಟು ಅನಾರೋಗ್ಯ ಸಮಸ್ಯೆಗಳು ಎದುರಾಗಲಿವೆ. ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗೊಳಿಸಿದರೆ, ಇಂತಹ ಸಮಸ್ಯೆಗಳಿಗೆ ಸಾಕಷ್ಟು ಪರಿಹಾರ ದೊರೆಯಲಿದೆ'' ಎಂದು ಅವರು ಹೇಳಿದರು.

ಕರ್ನಾಟಕ ಪರಿಸರ ಸ್ನೇಹಿಯಾಗಿಸಬೇಕು: ''ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಬೇಕಾಗಿದ್ದು, ಇದಕ್ಕಾಗಿ ವಿಶೇಷವಾಗಿ ಸಂಸ್ಕರಣಾ ವಲಯದಲ್ಲಿ ಕಾರ್ಯನಿರ್ವಹಿಸಲಿರುವ ಕೈಗಾರಿಕೆಗಳಿಗೆ ಸರ್ಕಾರ ಸೂಕ್ತ ಸಹಕಾರ ಮತ್ತು ನೆರವು ನೀಡಲಿದೆ. ಕರ್ನಾಟಕವನ್ನು ಪರಿಸರ ಸ್ನೇಹಿಯಾಗಿ ಮಾಡುವ ಜೊತೆಗೆ ಈ ವಲಯದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಒತ್ತು ನೀಡಲಾಗುವುದು. ಅನೇಕ ಕೈಗಾರಿಕೋದ್ಯಮಗಳು ಒಂದುಗೂಡಿ ರೀ ಕಾಮರ್ಸ್‌ ಎಕ್ಸ್‌ ಪೋ ಆಯೋಜಿಸಿರುವುದು ಉತ್ತಮ ಬೆಳವಣಿಗೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ: ''ಜಗತ್ತಿನಲ್ಲಿ ಅತಿ ದೊಡ್ಡ ಸಮಸ್ಯೆ ಎಂದರೆ, ಅದು ಮಾಲಿನ್ಯ, ಆಹಾರ, ನೀರು, ಗಾಳಿ ಸೇರಿ ಎಲ್ಲಾ ವಲಯಗಳು ಕಲುಷಿತಗೊಂಡಿವೆ. ಹವಾಮಾನ ವೈಪರೀತ್ಯ ಜಾಗತಿಕ ತಾಪಮಾನಕ್ಕೂ ತ್ಯಾಜ್ಯ ಕಾರಣವಾಗಿದೆ. ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧದಿಂದ ಸಾಕಷ್ಟು ಪರಿಹಾರವಿದ್ದು, ಜೊತೆಗೆ ಇ ತ್ಯಾಜ್ಯ ಇತ್ಯರ್ಥ ಮಾಡದಿದ್ದರೆ, ಅನೇಕ ರೋಗಗಳು ಬರುತ್ತವೆ ಎಂಬುದನ್ನು ಸಹ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.

''ನಾವು ಅಭಿವೃದ್ಧಿ ಜೊತೆಗೆ ಪ್ರಕೃತಿ, ಪರಿಸರ, ಅರಣ್ಯ, ಜಲಮೂಲಗಳನ್ನೂ ಸಂರಕ್ಷಿಸಬೇಕು. ತಂತ್ರಜ್ಞಾನದ ನೆರವು ಪಡೆದು ಸಕಲ ಜೀವ, ಸಸ್ಯ ಸಂಕುಲ ಉಳಿಸಬೇಕು. ರಾಜ್ಯದ ಹಸಿರು ವ್ಯಾಪ್ತಿ ಹೆಚ್ಚಿಸಲು 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿರುವುದು'' ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಎಲ್ಲ ವಸ್ತುಗಳ ಸಮರ್ಪಕ ಬಳಕೆಗೆ ಸಲಹೆ: "ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ", "ಸರಕುಗಳು ಮತ್ತು ವಸ್ತುಗಳ ಮರುಬಳಕೆ" ಮತ್ತು "ವೃತ್ತಾಕಾರದ ಆರ್ಥಿಕತೆ" ಇಂದಿನ ಅಗತ್ಯವಾಗಿದೆ. ಈ ಪ್ರಕೃತಿಯಲ್ಲಿ ನಿರುಪಯುಕ್ತವಾದ ವಸ್ತು ಯಾವುದೂ ಇಲ್ಲ. ಎಲ್ಲ ವಸ್ತುಗಳ ಸಮರ್ಪಕ ಬಳಕೆ ಮಾಡುವುದನ್ನು ಕಲಿತರೆ, ಪ್ರಕೃತಿ, ಪರಿಸರ ಸಂಪನ್ಮೂಲ ಉಳಿಸಬಹುದು ಎಂದರು.

ರೀ ಕಾರ್ಮಸ್‌ ಏಕ್ಸ್‌ ಪೋ ಆಯೋಜಕ ಮತ್ತು ಊರ್ಧವ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸಂಸ್ಥಾಪಕ ವೆಂಕಟ್‌ ರೆಡ್ಡಿ ಪಾಟೀಲ್‌ ಮಾತನಾಡಿ, ''ಜಗತ್ತಿನಲ್ಲಿ ಮರು ಸಂಸ್ಕರಣೆ ಅತ್ಯಂತ ಅಗತ್ಯವಾಗಿರುವ ವಲಯವಾಗಿದ್ದು, ಪರಿಸರ ಸಂರಕ್ಷಣೆಗೆ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಇದಕ್ಕಾಗಿ ಅಗತ್ಯ ಕರಡು ಕಾರ್ಯಸೂಚಿ ತಯಾರಿಸಲು ದೇಶದ ಪ್ರಮುಖ ತಜ್ಞರು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Job Alert: ರಾಜ್ಯ ಸರ್ಕಾರದಿಂದ ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.