ETV Bharat / state

ಸ್ಮಶಾನ ಭೂಮಿಗಾಗಿ ಅರ್ಜಿ ಸಲ್ಲಿಸದ ಸಾರ್ವಜನಿಕರು: ಹೈಕೋರ್ಟ್ ಬೇಸರ - ETV Bharat kannada News

ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿಯಿದೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

High Court
ಹೈಕೋರ್ಟ್
author img

By

Published : Apr 20, 2023, 8:20 PM IST

ಬೆಂಗಳೂರು : ಸಾರ್ವಜನಿಕ ಪ್ರಕಟಣೆ ನೀಡಿದ್ದರೂ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಭೂಮಿಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸದ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿಯಿದೆ ಎಂದು ಬೇಸರ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಸ್ಮಶಾನ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಸುವಂತೆ ಸೂಚಿಸಿ ಹೈಕೋರ್ಟ್ ಹೊರಡಿಸಿರುವ ಆದೇಶ ಜಾರಿಗೊಳಿಸಿತ್ತು. ಇದಕ್ಕೆ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾ.ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ, ಜನರ ಧೋರಣೆ ವಿರುದ್ಧ ಅಸಮಾಧಾನ ಹೊರಹಾಕಿತು.

ಅರ್ಜಿ ವಿಚಾರಣೆ ವೇಳೆ ಸರ್ಕಾರಿ ವಕೀಲ ಕಿರಣ್ ಕುಮಾರ್, 2023ರ ಏ.19 ರಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಒದಗಿಸಿರುವ ಪತ್ರ ಒಳಗೊಂಡ ಮೆಮೋವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. 2023ರ ಏ.9 ರಂದು ಹೈಕೋರ್ಟ್ ಹೊರಡಿಸಿದ ಆದೇಶದಂತೆ ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗವಿಲ್ಲದ ಗ್ರಾಮಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬಹುದು ಎಂದು ತಿಳಿಸಿ ಪತ್ರಿಕೆಯಲ್ಲಿ ಸಾರ್ವಜನಿಕ ಪ್ರಕಟಣೆ ನೀಡಲಾಗಿತ್ತು. ಆದರೆ, ಸಾರ್ವಜನಿಕ ಪ್ರಕಟಣೆ ಪ್ರಕಟಿಸಿದ ಹೊರತಾಗಿಯೂ ಇಡೀ ರಾಜ್ಯದ ಯಾವುದೇ ಭಾಗದಿಂದಲೂ ಯಾವೊಬ್ಬ ಗ್ರಾಮಸ್ಥನಿಂದಲೂ ಸ್ಮಶಾನಕ್ಕೆ ಭೂಮಿ ಮಂಜೂರಾತಿ ಕೋರಿ ಮನವಿ ಬಂದಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.

ಇದಕ್ಕೆ ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಜನರಿಗೆ ಸ್ಮಶಾನಕ್ಕೆ ಭೂಮಿ ಸೇರಿ ಇತರೆ ಸೌಲಭ್ಯ ಪಡೆಯುವುದರ ಬಗ್ಗೆ ಜನರಿಗೆ ಆಸಕ್ತಿ ಇಲ್ಲ. ಚುನಾವಣೆ ವಿಚಾರವಾಗಿ ಹೆಚ್ಚಿನ ಗಮನ ಹರಿಸುತ್ತಾರೆ. ಚುನಾವಣೆ ಬಂತಲ್ಲ; ಹಣ ವಸೂಲಿ ಮಾಡುವ ಕುರಿತು ಯೋಚಿಸುತ್ತಿದ್ದಾರೆ. ಹಣ ಸ್ವೀಕರಿಸಿ ಮತ ಹಾಕಬೇಕಲ್ಲವೇ? ಅದುವೇ ಜನರಿಗೆ ಇಷ್ಟದ ವಿಷಯ. ಜನ ಹೀಗಿರುವಾಗ ನ್ಯಾಯಾಲಯ ಏನು ಮಾಡಲು ಸಾಧ್ಯ ಎಂದಿದೆ.

ಅಲ್ಲದೆ, ಹೇಗೂ ಸ್ವಾತಂತ್ರ್ಯ ಸಿಕ್ಕಿದೆ; ಎಂಜಾಯ್ ಮಾಡಬೇಕಷ್ಟೇ ಎಂಬ ಮನಸ್ಥಿತಿ ಜನರಲ್ಲಿದೆ. ಮತ್ತೆ ಸ್ವಾತಂತ್ರ್ಯ ಹೋದಾಗ ಅದರ ಮೌಲ್ಯ ಏನು ಎಂಬುದು ತಿಳಿಯುತ್ತದೆ. ಮೊದಲು ಸಾರ್ವಜನಿಕರು ಮತ್ತು ಅವರ ಮನಸ್ಥಿತಿ ಬದಲಾಗಬೇಕು. ಅರ್ಜಿದಾರ ವಕೀಲ ಮೊಹಮ್ಮದ್ ಇಕ್ಬಾಲ್, ಸರ್ಕಾರವು 2023 ರ ಏ.20 ವರೆಗೆ (ಗುರುವಾರ) ರಾಜ್ಯದ ಯಾವೆಲ್ಲಾ ಗ್ರಾಮಗಳಿಗೆ ಸ್ಮಶಾನಕ್ಕೆ ಭೂಮಿ ಸರ್ಕಾರ ಕಲ್ಪಿಸಲಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸಮಗ್ರ ಪ್ರಮಾಣ ಪತ್ರ ಸಲ್ಲಿಸಲಾಗುವುದು. ಅದಕ್ಕೆ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರಿಗೆ ಮೇ 23 ರವರೆಗೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ : ವಿನಯ್ ಕುಲಕರ್ಣಿ ಧಾರಾವಾಡ ಪ್ರವೇಶಕ್ಕೆ ಅನುಮತಿ ಕೋರಿ ಅರ್ಜಿ: ಸರ್ಕಾರ, ಸಿಬಿಐಗೆ ನೋಟಿಸ್ ನೀಡಿದ ಹೈಕೋರ್ಟ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.