ETV Bharat / state

ಅಧ್ವಾನ ಸ್ಥಿತಿಗೆ ತಲುಪಿರುವ ನಗರದ ರಸ್ತೆಗಳು: ಗುಂಡಿಗಳಿಂದ ಮುಕ್ತಿ ಯಾವಾಗ ಎಂದು ಸಾರ್ವಜನಿಕರ ಪ್ರಶ್ನೆ

ಕಳಪೆ ಡಾಂಬರೀಕರಣದಿಂದಾಗಿ ಸಣ್ಣ ಮಳೆಗೇ ರಸ್ತೆಗಳು ಗುಂಡಿ ಬಿದ್ದು ಹಾಳಾಗುತ್ತಿವೆ. ಮತ್ತೆ ಕೆಲವು ಕಡೆ ನಾನಾ ಅಭಿವೃದ್ಧಿ ಕಾಮಗಾರಿಗಳ ನೆಪದಲ್ಲಿ ಗೊತ್ತು ಗುರಿ ಇಲ್ಲದೇ ರಸ್ತೆಗಳನ್ನು ಪದೇ ಪದೆ ಅಗೆಯಲಾಗುತ್ತಿದೆ ಎಂದು ವಾಹನ ಸವಾರರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

author img

By

Published : Oct 21, 2022, 12:26 PM IST

KN_BNG_01_
ಉದ್ಯಾನ ನಗರಿಯಲ್ಲಿ ಸಾಲು ಸಾಲು ಗುಂಡಿಗಳು

ಬೆಂಗಳೂರು: ಉದ್ಯಾನ ನಗರಿಯಲ್ಲಿ ಮಳೆಯಿಂದಾಗಿ ರಸ್ತೆ ಹೊಂಡಗಳು ಜನರ ಪಾಲಿಗೆ ಮೃತ್ಯು ಗುಂಡಿಗಳಾಗಿ ಪರಿಣಮಿಸುತ್ತಿವೆ. ಇದರಿಂದ ಬಿಬಿಎಂಪಿ, ರಾಜ್ಯ ಸರ್ಕಾರ ಮುಕ್ತಿ ನೀಡುವುದು ಯಾವಾಗ ಎಂದು ವಾಹನ ಸವಾರರು ಪ್ರಶ್ನೆ ಮಾಡುತ್ತಿದ್ದಾರೆ.

ಗುಂಡಿ ತಪ್ಪಿಸಲು ಹೋಗಿ ಬೆಂಗಳೂರು ನಗರದಲ್ಲಿಯೇ ಹಲವು ದ್ವಿಚಕ್ರ ವಾಹನ ಸವಾರರು ದಾರುಣವಾಗಿ ಬಲಿಯಾಗುತ್ತಿದ್ದಾರೆ. ಆದರೂ, ಬಿಬಿಎಂಪಿ ಸೂಕ್ತ ಕ್ರಮಕ್ಕೆ ಮುಂದಾಗದೆ ಮಳೆಯ ನೆಪ ಹೇಳುತ್ತಿದೆ ಎಂದು ವಾಹನ ಸವಾರ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ದ್ವಿಚಕ್ರ ವಾಹನ ಸವಾರರು, ಕಳಪೆ ಡಾಂಬರೀಕರಣದಿಂದ ಸಣ್ಣ ಮಳೆಗೇ ರಸ್ತೆಗಳು ಗುಂಡಿ ಬಿದ್ದು ಹಾಳಾಗುತ್ತಿವೆ. ಮತ್ತೆ ಕೆಲವು ಕಡೆ ನಾನಾ ಅಭಿವೃದ್ಧಿ ಕಾಮಗಾರಿಗಳ ನೆಪದಲ್ಲಿ ಗೊತ್ತು ಗುರಿ ಇಲ್ಲದೆ ರಸ್ತೆಗಳನ್ನು ಪದೇಪದೆ ಅಗೆಯಲಾಗುತ್ತಿದೆ.‌ ಇದರಿಂದ ಹೆಚ್ಚಿನ ತೊಂದರೆ ಉಂಟಾಗಿದೆ ಎಂದಿದ್ದಾರೆ.

ಉದ್ಯಾನ ನಗರಿಯಲ್ಲಿ ಸಾಲು ಸಾಲು ಗುಂಡಿಗಳು

ಯಾವ ಯಾವ ಅಭಿವೃದ್ಧಿ ಕಾಮಗಾರಿ: ಸಿಲಿಕಾನ್ ಸಿಟಿ ಸೇರಿದಂತೆ ನಗರ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ, ವೈಟ್‌ಟಾಪಿಂಗ್‌, ಟೆಂಡರ್‌ ಶ್ಯೂರ್‌, ರಸ್ತೆ ವಿಸ್ತರಣೆ, ಫುಟ್‌ಪಾತ್‌ ಅಭಿವೃದ್ಧಿ, ನೆಲದಡಿ ವಿದ್ಯುತ್‌ ಕೇಬಲ್‌ ಅಳವಡಿಕೆ, ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿ ನೆಪದಲ್ಲಿ ರಸ್ತೆಗಳನ್ನು ಯದ್ವಾತದ್ವಾ ಅಗೆಯಲಾಗುತ್ತಿದೆ. ಕೆಲಸ ಮುಗಿದ ನಂತರ ಮರು ಡಾಂಬರೀಕರಣ ಮಾಡದೇ ವರ್ಷಾನುಗಟ್ಟಲೆ ಹಾಗೆಯೇ ಬಿಡಲಾಗುತ್ತಿದೆ. ಹಾಗಾಗಿ ಜನ ಪ್ರಾಣಾಪಾಯದ ಸ್ಥಿತಿಯಲ್ಲಿ ರಸ್ತೆಯಲ್ಲಿ ಸಂಚರಿಸುವಂತಾಗಿದೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.

ಸವಾರರಿಗೆ ಕಂಟಕ: ರಸ್ತೆ ಗುಂಡಿಗಳು ಬೈಕ್‌ ಸವಾರರಿಗೆ ಮೃತ್ಯು ಗುಂಡಿಗಳಾಗಿ ಪರಿಣಮಿಸಿವೆ. ಅನಿರೀಕ್ಷಿತವಾಗಿ ಎದುರಾಗುವ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನ ಸ್ಕಿಡ್‌ ಆಗಿ ಅಥವಾ ಹಿಂಬದಿಯಿಂದ ಬರುವ ವಾಹನಗಳು ಡಿಕ್ಕಿಯಾಗಿ ಸಾವುಗಳು ಸಂಭವಿಸುತ್ತಿವೆ. ಗುಂಡಿಮಯ ರಸ್ತೆಗಳಿಂದ ಟ್ರಾಫಿಕ್‌ ಜಾಮ್‌ ಕಾರಣವಾಗುತ್ತಿದ್ದು, ಪೆಟ್ರೋಲ್‌, ಡೀಸೆಲ್‌ ಹೆಚ್ಚು ವ್ಯಯವಾಗುತ್ತಿದೆ.

ವಾಹನಗಳ ಟೈರ್‌ ಬಹುಬೇಗನೆ ಹಾಳಾಗುತ್ತಿವೆ. ಬಿಡಿ ಭಾಗಗಳಿಗೆ ಧಕ್ಕೆಯಾಗುತ್ತಿದೆ. ವಾಹನಗಳಲ್ಲಿ ಸಂಚರಿಸುವವರ ಬೆನ್ನು ಮೂಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದು ಬೆನ್ನು ನೋವಿಗೆ ತುತ್ತಾಗುತ್ತಿದ್ದಾರೆ ಎಂದು ಮತ್ತೋರ್ವ ವಾಹನ ಸವಾರ ರಾಜೇಶ್ ಎಂಬುವರು ಹೇಳಿದ್ದಾರೆ.

ಎಲ್ಲಿ ಹೆಚ್ಚು ಗುಂಡಿ: ಮಳೆಯಿಂದಾಗಿ ನಗರದ ನಾಗರಬಾವಿ ರಸ್ತೆ, ಜಯಮಹಲ್ ರಸ್ತೆ, ವಿಲ್ಸನ್ ಗಾರ್ಡನ್, ಶಾಂತಿನಗರ, ಬಿಟಿಎಂ, ತಿಲಕ್ ನಗರ, ಜೆಪಿನಗರ, ಮೈಸೂರು ಮುಖ್ಯ ರಸ್ತೆ, ಟ್ಯಾನರಿ ರಸ್ತೆ, ನಾಗವಾರ ರಸ್ತೆ, ಮಡಿವಾಳ ಸೇರಿದಂತೆ ಬಹುತೇಕ ಕಡೆ ರಸ್ತೆ ಗುಂಡಿಗಳ ಸಂಖ್ಯೆ ದ್ವಿಗುಣವಾಗಿದೆ.

ಇದನ್ನೂ ಓದಿ: ಈ ವರ್ಷದೊಳಗೆ 22 ಸಾವಿರ ರಸ್ತೆ ಗುಂಡಿ ಮುಚ್ಚುವ ಗುರಿ: ಬಿಬಿಎಂಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.