ಬೆಂಗಳೂರು: ನಾಳೆ ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಗರದ ಕೆ.ಆರ್ ಪುರ ಮಾರುಕಟ್ಟೆ ಆವರಣ ಜನರಿಂದ ತುಂಬಿ ಹೋಗಿದೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಜನರು ಕೊರೊನಾ ಮರೆತು ಹಬ್ಬದ ಖರೀದಿಗಾಗಿ ಮುಗಿಬಿದ್ದಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಮಹದೇವಪುರ ಮತ್ತು ಕೆ.ಆರ್ ಪುರದಲ್ಲಿ ಬೆಂಗಳೂರಿನ ಎಲ್ಲಾ ಕ್ಷೇತ್ರಕ್ಕಿಂತ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಈ ನಡುವೆ 3ನೇ ಅಲೆ ಭೀತಿಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದರೂ ಇದ್ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳದ ಜನ ಹಬ್ಬದ ಗುಂಗಿನಲ್ಲಿ ಮುಳುಗಿದ್ದಾರೆ.
ಕೆ.ಆರ್ ಪುರ, ಮಹದೇವಪುರ, ಹೊಸಕೋಟೆ ಹಾಗೂ ಕೋಲಾರದಿಂದ ಆಗಮಿಸಿರುವ ವ್ಯಾಪಾರಸ್ಥರು ಮತ್ತು ಗ್ರಾಹಕರು ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ಮಾರುಕಟ್ಟೆಯಲ್ಲಿ ಗಿಜುಗುಡುತ್ತಿದ್ದಾರೆ. ಈ ನಡುವೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ. ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿರುವ ಕಾರಣ ಸುಮಾರು 1 ಕಿ.ಮೀ ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ: ಗೋಕಾಕಿನಲ್ಲಿ ಮೊಹರಂ ಹಬ್ಬದ ಗಮ್ಮತ್ತು: ಜನಸಂದಣಿಯಲ್ಲಿ ಕೋವಿಡ್ ನಿಯಮ ಮಾಯ