ಬೆಂಗಳೂರು: ಮಹಾಮಾರಿ ಕೊರೊನಾಗೆ ಬಲಿಯಾದ ಸ್ವಚ್ಛತಾ ಕರ್ಮಿ ಶಿಲ್ಪಾ ಅವರಿಗೆ ಇಂದು ನಗರದ ಹಲವು ಪ್ರದೇಶಗಳ ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಮೋಂಬತ್ತಿ ಹಚ್ಚಿ ಸಂತಾಪ ಸೂಚಿಸಿದ್ದಾರೆ.
ಕೊರೊನಾ ವೈರಸ್ ಭಯ, ಲಾಕ್‍ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿ ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಗದೆ ಕೊನೆಯುಸಿರೆಳೆದಿದ್ದರು.
ಇವರಿಗೆ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದೆ, ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸಾವನ್ನಪ್ಪಿರುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಸಂತಾಪ ಸೂಚಿಸಿದರು.
ಕೂಡಲೇ ಬಿಬಿಎಂಪಿ ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.