ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ - ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ. ಶಿಕ್ಷಣ ಸಚಿವರು ಈ ವೇಳಾಪಟ್ಟಿಯನ್ನು ತಮ್ಮ ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

author img

By

Published : Oct 21, 2022, 7:08 PM IST

ಬೆಂಗಳೂರು: ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಮಂಡಳಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಪೋಷಕರಿಗೆ ತಿಳಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 2023ರ ಮಾರ್ಚ್ 10 ರಿಂದ 29ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದೆ. ಈ ವೇಳಾಪಟ್ಟಿಯನ್ನು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸುವಂತೆ ಸೂಚಿಸಲಾಗಿದೆ.

  • 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.@BSBommai pic.twitter.com/pVBpV83P8s

    — B.C Nagesh (@BCNagesh_bjp) October 21, 2022 " class="align-text-top noRightClick twitterSection" data=" ">

ಜಿಲ್ಲಾ ಉಪನಿರ್ದೇಶಕರು ತಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರಾಂಶುಪಾಲರಿಗೆ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಕಳುಹಿಸಿ ಸಂಬಂಧಿಸಿದ ಕಾಲೇಜುಗಳ ಸೂಚನಾ ಫಲಕದಲ್ಲಿ ಪ್ರಕಟಿಸಿ, ವ್ಯಾಪಕ ಪ್ರಚಾರ ನೀಡುವಂತೆ ಕ್ರಮಕೈಗೊಳ್ಳಬೇಕು. ಅದರಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 21ರಂದು ಸಂಜೆ 5.30 ರ ಒಳಗಾಗಿ jdexam.dpue@gmail.com ಈಮೇಲ್​ಗೆ ಆಕ್ಷೇಪಣೆ​ ಸಲ್ಲಿಸಲು ಸೂಚಿಸಲಾಗಿದೆ. ಬಳಿಕ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.