ಬೆಂಗಳೂರು: ಪಲ್ಸರ್ ಬೈಕ್ಗಳನ್ನೇ ಟಾರ್ಗೆಟ್ ಮಾಡಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಪೀಣ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಣಿಗಲ್ ಮೂಲದ ನಾಗಸಂದ್ರ ನಿವಾಸಿಯಾಗಿರುವ ವೆಂಕಟೇಶ್ ಬಂಧಿತ ಆರೋಪಿ. ಬೈಕ್ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಈತ, ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನು ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ.
ಇನ್ನು ಕಳ್ಳತನ ಮಾಡಿದ ಬೈಕ್ಗಳನ್ನು ಮಾರಾಟ ಮಾಡಲು ಮುಂದಾಗಿದ್ದ ಮಾಹಿತಿ ಅರಿತ ಪೀಣ್ಯ ಪೊಲೀಸರು ಆರೋಪಿಯನ್ನು ಸೆರೆಹಿಡಿದು, 3.5 ಲಕ್ಷ ರೂಪಾಯಿ ಮೌಲ್ಯದ 9 ಬೈಕ್ ಗಳನ್ನು ಜಪ್ತಿ ಮಾಡಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ಮಾರುಕಟ್ಟೆಯಲ್ಲಿ ಪಲ್ಸರ್ ಬೈಕ್ಗಳಿಗೆ ಬೇಡಿಕೆ ಇರುವುದರಿಂದ ಬೈಕ್ ಕದ್ದು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.