ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಯಂತೆ ಇಂದಿನಿಂದ ಫೆ. 03ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಗರದಲ್ಲಿ ನಡೆಯಲಿದೆ.
ಪಾಲಿಕೆ ವ್ಯಾಪ್ತಿಯ 198 ವಾರ್ಡ್ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪಾಲಿಕೆಯು ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ-2021:
— N. Manjunatha Prasad,IAS (@BBMPCOMM) January 30, 2021 " class="align-text-top noRightClick twitterSection" data="
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗದರ್ಶನದಂತೆ ದಿನಾಂಕ: 31-01 ರಿಂದ 03-02-2021 ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪಾಲಿಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿರುತ್ತದೆ. 1/4
">ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ-2021:
— N. Manjunatha Prasad,IAS (@BBMPCOMM) January 30, 2021
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗದರ್ಶನದಂತೆ ದಿನಾಂಕ: 31-01 ರಿಂದ 03-02-2021 ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪಾಲಿಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿರುತ್ತದೆ. 1/4ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ-2021:
— N. Manjunatha Prasad,IAS (@BBMPCOMM) January 30, 2021
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗದರ್ಶನದಂತೆ ದಿನಾಂಕ: 31-01 ರಿಂದ 03-02-2021 ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪಾಲಿಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿರುತ್ತದೆ. 1/4
ರಾಷ್ಟ್ರೀಯ ಪಲ್ಸ್ ಪೋಲಿಯೋ-2021 ಕಾರ್ಯಕ್ರಮದಂತೆ ಬಿಬಿಎಂಪಿಯ 140 ಯೋಜನಾ ಘಟಕಗಳ, 198 ವಾರ್ಡ್ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಿಕೊಳ್ಳಲಾಗಿದೆ. ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,04,45,633 ಜನಸಂಖ್ಯೆ ಇದ್ದು, 28,38,822 ಮನೆಗಳಿವೆ. 0-5 ವರ್ಷದ 10,84,392 ಮಕ್ಕಳಿದ್ದಾರೆ. 960 ಕೊಳಚೆ ಪ್ರದೇಶಗಳಲ್ಲಿ 3,60,712 ಮಕ್ಕಳಿದ್ದಾರೆ. 3,995 ವಲಸೆ ಜನಾಂಗದ ಪ್ರದೇಶಗಳಲ್ಲಿ 1,97,565 ಜನಸಂಖ್ಯೆಯಿದ್ದು, 18,507 ಮಂದಿ 5 ವರ್ಷದೊಳಗಿನ ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆ: ವರದಕ್ಷಿಣೆಗಾಗಿ ಗಂಡನ ಮನೆಯವರಿಂದ ಕೊಲೆ ಆರೋಪ
ಪಲ್ಸ್ ಪೋಲಿಯೋ ಲಸಿಕೆ ಹಾಕಲು 3,340 ಬೂತ್‌ಗಳು, 456 ಸ್ಥಿರ ತಂಡಗಳು, 324 ಸಂಚಾರಿ ತಂಡಗಳು, 14,922 ಲಸಿಕಾ ಕಾರ್ಯಕರ್ತರು ಹಾಗೂ 426 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.