ETV Bharat / state

ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ... ಮಿಸ್​ ಮಾಡದೆ ನಿಮ್ಮ ಮಕ್ಕಳಿಗೂ ಹಾಕಿಸಿ ಲಸಿಕೆ - ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ, ಐದು ವರ್ಷದೊಳಗಿನ ಮಕ್ಕಳಿಗೆ ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

pulse-polio-program-statewide-today
ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ
author img

By

Published : Jan 19, 2020, 8:20 AM IST

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ, ಐದು ವರ್ಷದೊಳಗಿನ ಮಕ್ಕಳಿಗೆ ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಈ ಬಾರಿ ಸುಮಾರು 64,65,561 ಮಕ್ಕಳು ಲಸಿಕೆ ಹಾಕಿಸಿಕೊಳ್ಳಲಿದ್ದು, ಲಸಿಕೆ ಹಾಕಲು 33,021 ಬೂತ್​ಗಳು, 46,620 ತಂಡಗಳು, 1,09,554 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. 7,105 ಮೇಲ್ವಿಚಾರಕರು, 977 ಸಂಚಾರಿ ತಂಡಗಳು, 2,111 ಟ್ರಾನ್ಸಿಟ್ ತಂಡಗಳನ್ನು ರಚನೆ ಮಾಡಲಾಗಿದೆ.

ರಾಜಾದ್ಯಂತ ಬೆಳಗ್ಗೆ 8 ರಿಂದ ಸಂಜೆ 5 ವರೆಗೆ ಲಸಿಕೆ ಹಾಕಲಾಗುತ್ತೆ. ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಲಸಿಕೆ ಹಾಕಲಿದ್ದಾರೆ.

ಈ ಕುರಿತಾಗಿ ಹೆಚ್ಚಿನ ಮಾಹಿತಿಗೆ 104ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದ್ದು, ಪ್ರತಿಯೊಂದು ಹಳ್ಳಿ, ನಗರ-ಪಟ್ಟಣ ಮಾತ್ರವಲ್ಲದೇ ಗುಡ್ಡಗಾಡು ಪ್ರದೇಶ, ಇಟ್ಟಿಗೆ ಬಟ್ಟಿ, ಕಾಮಗಾರಿ ಪ್ರದೇಶ, ವಲಸಿಗರು ನೆಲೆಸಿರುವ ಪ್ರದೇಶ, ತೋಟದ ಮನೆ, ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ.

ಈ ಕಾರ್ಯಕ್ಕಾಗಿ ಆಶಾ- ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಇತರೆ ಸ್ವಯಂ ಸೇವಕರನ್ನು ಸಜ್ಜುಗೊಳಿಸಲಾಗಿದೆ.

Intro:Body:

123

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.