ETV Bharat / state

ಮರಣೋತ್ತರ ಕರ್ನಾಟಕ ರತ್ನ ಪಡೆಯಲಿರುವ ಮೊದಲ ವ್ಯಕ್ತಿ ಪುನೀತ್: ರಾಜ್ಯೋತ್ಸವದಂದು ಪ್ರದಾನ - ಕನ್ನಡ ನಾಡಿನಲ್ಲಿ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ

ಕನ್ನಡ ನಾಡಿನಲ್ಲಿ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ, ಕೊಡುಗೆ ನೀಡಿದ ಗಣ್ಯರಿಗೆ ನೀಡಲಾಗುತ್ತದೆ. 1992 ರಲ್ಲಿ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಲಾಯಿತು.

ಅಪ್ಪುಗೆ ಅಪರೂಪದ ಪ್ರಶಸ್ತಿ: ಮರಣೋತ್ತರ ಕರ್ನಾಟಕ ರತ್ನ ಪಡೆಯುತ್ತಿರುವ ಮೊದಲ ವ್ಯಕ್ತಿ ಪುನೀತ್
puneeth-is-the-first-person-to-receive-the-karnataka-ratna-posthumously
author img

By

Published : Oct 28, 2022, 3:25 PM IST

ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನವನ್ನು ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಈವರೆಗೂ 8 ಗಣ್ಯರು ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದು, ಒಂಭತ್ತನೆಯವರಾಗಿ ಅಪ್ಪು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ, ಕೊಡುಗೆ ನೀಡಿದ ಗಣ್ಯರಿಗೆ ನೀಡಲಾಗುತ್ತದೆ. 1992 ರಲ್ಲಿ ಮೊದಲ ಬಾರಿಗೆ ಈ ಪದ್ಧತಿ ಆರಂಭಿಸಲಾಯಿತು. ರಾಷ್ಟ್ರಕವಿ ಕುವೆಂಪು ಅವರಿಗೆ ಮೊದಲ ಪ್ರಶಸ್ತಿ ಸಂದಿದೆ. 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆಯನ್ನು ಇದು ಹೊಂದಿರಲಿದೆ.

ಕರ್ನಾಟಕ ರತ್ನ ಪಡೆದ ಗಣ್ಯರಿವರು: 1992 ರಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಷ್ಟ್ರಕವಿ ಕುವೆಂಪು ಅವರಿಗೆ ಮೊದಲ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಯಿತು. ನಂತರ 1992 ರಲ್ಲಿಯೇ ಚಲನಚಿತ್ರ ರಂಗದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ವರನಟ ಡಾ.ರಾಜ್ ಕುಮಾರ್ ಎರಡನೆಯವರಾಗಿ ಪ್ರಶಸ್ತಿ ಪಡೆದುಕೊಂಡರು. 1999 ರಲ್ಲಿ ರಾಜಕೀಯ ಕ್ಷೇತ್ರದಲ್ಲಿನ ಸಾಧನೆಗಾಗಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರಿಗೆ, 2000 ರಲ್ಲಿ ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರೊ. ಸಿ.ಎನ್.ಆರ್. ರಾವ್, 2005 ರಲ್ಲಿ ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಪಂ. ಭೀಮಸೇನ ಜೋಷಿ, 2006 ರಲ್ಲಿ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ, 2008 ರಲ್ಲಿ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ದೇ. ಜವರೇಗೌಡ, 2009 ರಲ್ಲಿ ಸಾಮಾಜಿಕ ಸೇವೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿನ ಕೊಡುಗೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕರ್ನಾಟಕ ರತ್ನ ಪ್ರಶಸ್ತಿ ಪಡೆದಿದ್ದು, ಈ ಬಾರಿ 2022 ರಲ್ಲಿ ಸಿನಿಮಾ ಕ್ಷೇತ್ರ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಪುನೀತ್ ರಾಜ್ ಕುಮಾರ್ ಆಯ್ಕೆಯಾಗಿದ್ದಾರೆ.

ಬಾಲನಟನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಪುನೀತ್ ನಂತರ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡು ತಮ್ಮದೇ ಆದ ಛಾಪು ಮೂಡಿಸಿದ್ದರು. ನಟನೆ, ಗಾಯನದ ಮೂಲಕ ಸಿನಿಪ್ರೇಕ್ಷಕರ ಮನಗೆದ್ದಿದ್ದರು. ಯುವ ನಟರಿಗೆ ಸ್ಫೂರ್ತಿಯಾಗಿದ್ದರು. ಉತ್ತಮ ಸಂದೇಶ ನೀಡುವ ಚಿತ್ರಗಳು, ಸದಭಿರುಚಿಯ ಚಿತ್ರಗಳ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿ ಯುವ ಸಮೂಹವನ್ನು ಸೆಳೆದಿದ್ದರು. ನಟನೆ ಜೊತೆ ಜೊತೆಗೆ ಎಲೆಮರೆ ಕಾಯಿ ರೀತಿ ಸಮಾಜ ಸೇವೆಯಲ್ಲಿ ತೊಡಗಿ ಇಂದಿನ ಪೀಳಿಗೆಗೆ ಆದರ್ಶರಾಗಿದ್ದರು. ಅವರ ಈ ಸೇವೆಯನ್ನು ಪರಿಗಣಿಸಿಯೇ ಕರ್ನಾಟಕ ರತ್ನ ಪ್ರಶಸ್ತಿಗೆ ಅಪ್ಪು ಅವರನ್ನು ಆಯ್ಕೆ ಮಾಡಲಾಗಿದ್ದು, ನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕುವೆಂಪು ಅವರಿಂದ ಹಿಡಿದು ವೀರೇಂದ್ರ ಹೆಗ್ಗಡೆಯವರವರೆಗೂ 8 ಮಹನಿಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ಗಂಧದಗುಡಿ ಶೂಟಿಂಗ್​ ವೇಳೆ ಪುನೀತ್​ ಜೊತೆ ನಾನೂ ಟ್ರಕ್ಕಿಂಗ್​ ಮಾಡಿದ್ದೆ.. ಅಶ್ವಿನಿ ಪುನೀತ್​ ರಾಜ್​ಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.