ಕೊರೊನಾ ಎರಡನೇ ಅಲೆ ಎಲ್ಲಾ ಕಡೆ ಜೋರಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ.
ಜಗ್ಗೇಶ್ ದಂಪತಿಗೆ ಕೊರೊನಾ ಲಸಿಕೆ ಈಗಾಗಲೇ ಬಾಲಿವುಡ್, ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ತಾರೆಯರು ಈ ಕೊರೊನಾ ಲಸಿಕೆ ಪಡೆಯುವ ಮೂಲಕ, ಪ್ರತಿಯೊಬ್ಬರು ಈ ಕೊರೊನಾ ಲಸಿಕೆ ಪಡೆಯುವಂತೆ ಎಂದು ಸಲಹೆ ನೀಡಲಾಗುತ್ತಿದೆ. ಅದೇ ರೀತಿ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ತಾರೆಯರು ಕೊರೊನಾ ಲಸಿಕೆ ಪಡೆದಿದ್ದರು. ಇಂದು ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತು ಪತ್ನಿ ಅಶ್ವಿನಿ ಜೊತೆಗೆ ಮಲ್ಲೇಶ್ವರಂ, ಕೆ. ಸಿ ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದಿದ್ದಾರೆ.ಕೋವಿಡ್ ಲಸಿಕೆ ಪಡೆದ ನಟ ಜಗ್ಗೇಶ್ ನವರಸ ನಾಯಕ ಜಗ್ಗೇಶ್ ಮತ್ತು ಪತ್ನಿ ಪರಿಮಳ ಕೂಡ, ಮಲ್ಲೇಶ್ವರಂ ನಾರಾಯಣ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದಿದ್ದಾರೆ. ಇದರ ಜೊತೆಗೆ ನಟ ಶರಣ್ ಕೂಡ ಆಸ್ಪತ್ರೆಯೊಂದರಲ್ಲಿ ಕೊರೊನಾ ಲಸಿಕ ಹಾಕಿಸಿಕೊಂಡಿದ್ದಾರೆ.
ಕೊರೊನಾ ವ್ಯಾಕ್ಸಿನ್ ಪಡೆದ ಶರಣ್ ನಟ ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಕೊರೊನಾ ಕುರಿತು ಜಾಗೃತಿಗಾಗಿ ಸರ್ಕಾರದ ಜೊತೆ ಕೈ ಜೋಡಿಸಿದರು. ಈಗ ಸ್ವತಃ ಪುನೀತ್ ರಾಜ್‍ಕುಮಾರ್ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿದ್ದಾರೆ.
ಕೊರೊನಾ ಲಸಿಕೆ ಪಡೆದ ಜಗ್ಗೇಶ್ ಪತ್ನಿ ಪರಿಮಳ