ETV Bharat / state

ಪಕ್ಷದತ್ತ ಹೆಚ್ಚು ಯುವಕರನ್ನ ಸೆಳೆಯಲು ಸಂಘಟನೆ ಮಾಡಿ.. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಕರೆ

ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲಿರುವ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಇದರ ಪರಿಣಾಮ ಪಕ್ಷದತ್ತ ಜನರು ಒಲವು ತೋರಿಸುತ್ತಿದ್ದಾರೆ..

BY Vijayendra
ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ
author img

By

Published : Sep 23, 2020, 8:16 PM IST

ಬೆಂಗಳೂರು : ಯುವಕರು ಹೆಚ್ಚಿನ ರೀತಿ ಒಲವು ತೋರಿಸುವಂತೆ ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಮಹದೇವಪುರ ಕ್ಷೇತ್ರಕ್ಕೆ ಆಗಮಿಸಿದ್ದ ಅವರು, ಮಾಜಿ ಪಾಲಿಕೆ ಸದಸ್ಯರಾದ ಶ್ವೇತಾ ಹೂಡಿ ವಿಜಯಕುಮಾರ್‌ ಅವರ ಎಐಸಿಎಸ್‌ ಲೇಔಟ್​​​ನ ಮನೆಗೆ ಭೇಟಿ ನೀಡಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ

ಮಹದೇವಪುರ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲಿರುವ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಇದರ ಪರಿಣಾಮ ಪಕ್ಷದತ್ತ ಜನರು ಒಲವು ತೋರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಯುವಕರು ಪಕ್ಷದತ್ತ ಒಲವು ತೋರಿಸುವಂತೆ ಸಂಘಟನೆ ಮಾಡಿ ಎಂದು ಕರೆ ನೀಡಿದರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ತಿಗಳ (ವಹ್ನಿಕುಲ ಕ್ಷತ್ರಿಯ) ಸಂಘ ಅಧ್ಯಕ್ಷರಾದ ಜಯರಾಜ್‌, ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ, ತಮೇಶ್‌ ಗೌಡ, ಮಾಜಿ ಬಿಬಿಎಂಪಿ ಸದಸ್ಯರಾದ ರಮೇಶ್‌, ಮಾರ್ಕೇಟ್​​​‌ ರಮೇಶ್‌, ರಾಜಶೇಖರ ರೆಡ್ಡಿ, ಬಿಜೆಪಿ ಮುಖಂಡ ಕೈಕೊಂಡ್ರಹಳ್ಳಿ ಶೇಖರ್‌ ರೆಡ್ಡಿ, ಕುಂದೇನಹಳ್ಳಿ ರಮೇಶ್‌ ರೆಡ್ಡಿ, ಮಿಥುನ್‌ ರೆಡ್ಡಿ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.