ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭದಂದು ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
![putting-ambedkars-portrait-on-republic-day](https://etvbharatimages.akamaized.net/etvbharat/prod-images/5815830_thumbna.jpg)
ಜನವರಿ 26ರ ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವದಂದು ಕಡ್ಡಾಯವಾಗಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವಂತೆ ನಿರ್ದೇಶನ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಈ ಸಂಬಂಧ ಸರ್ಕಾರ ಶಿಕ್ಷಣ ಇಲಾಖೆಗೆ ಸುತ್ತೋಲೆ ಹೊರಡಿಸಿದೆ.