ETV Bharat / state

ಚುನಾವಣಾ ಸಂದರ್ಭ ಉಚಿತ ಕೊಡುಗೆ ಪ್ರಶ್ನಿಸಿ ಅರ್ಜಿ, ವಿಚಾರಣೆ ಮುಂದೂಡಿದ ಹೈಕೋರ್ಟ್ - ಸಂವಿಧಾನ

ಬೆಂಗಳೂರಿನ ನಿವೃತ್ತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಸೇರಿ ಮತ್ತಿತರರು ಚುನಾವಣೆ ವೇಳೆ ರಾಜಕೀಯ ಪಕ್ಷಗಳ ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

high court
ಹೈಕೋರ್ಟ್
author img

By ETV Bharat Karnataka Team

Published : Jan 2, 2024, 7:23 PM IST

Updated : Jan 2, 2024, 10:27 PM IST

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಉಡುಗೊರೆ ನೀಡುವ ಸಂಬಂಧದ ಪ್ರಕರಣ (ಫ್ರೀ ಬೀಸ್) ಸುಪ್ರೀಂ ಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿದೆ, ಈ ಸಂದರ್ಭದಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸಾಧ್ಯವಿಲ್ಲ ಎಂದು ತಿಳಿಸಿದ ಹೈಕೋರ್ಟ್​, ಈ ಸಂಬಂಧದ ಅರ್ಜಿಯ ವಿಚಾರಣೆಯನ್ನು ಮೂರು ತಿಂಗಳವರೆಗೆ ಮುಂದೂಡಿದೆ.

ಬೆಂಗಳೂರಿನ ನಿವೃತ್ತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಚುನಾವಣೆ ವೇಳೆ ರಾಜಕೀಯ ಪಕ್ಷಗಳ ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿತು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು, ಫ್ರೀಬೀಸ್​ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮದೇ ಆದ ಅಭಿಪ್ರಾಯ ಮತ್ತು ಮಿತಿ ಇರಬಹುದು. ಆದರೆ ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿದೆ. ನಾವು ಈಗ ಪ್ರತಿವಾದಿಗಳಿಗೆ ನೋಟಿಸ್ ಸಹ ಜಾರಿ ಮಾಡುವುದಿಲ್ಲ. ಸರ್ವೋಚ್ಚ ನ್ಯಾಯಾಲಯದಲ್ಲಿ ಏನಾಗುತ್ತದೋ ನೋಡಿಕೊಂಡು ಮುಂದಿನ ವಿಚಾರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು 12 ವಾರಗಳ ಕಾಲ ಮುಂದೂಡಲಾಗುವುದು ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ ಏನು ? ಜನರ ತೆರಿಗೆ ಹಣದಲ್ಲಿ ಅಧಿಕಾರ ಲಾಲಸೆಗೆ ಮತದಾರರಿಗೆ ಆಮಿಷವೊಡ್ಡಿ ಅವರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಬೊಕ್ಕಸದ ಹಣ ಬಳಸುವ ಬದಲು ಆಮಿಷಕ್ಕೆ ಬಳಕೆ ಮಾಡಲಾಗುತ್ತಿದೆ. ಮತದಾರರಿಗೆ ಪ್ರಲೋಭನೆ ಒಡ್ಡಿ ಮತ ಕೇಳುವುದು ಸಂವಿಧಾನಬಾಹಿರ ಹಾಗೂ ಜನಪ್ರತಿನಿಧಿಗಳ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹೀಗಾಗಿ ಸೂಕ್ತ ಮಾರ್ಗಸೂಚಿ ರೂಪಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂಓದಿ:'ಸೇವೆ ಖಾಯಂ ಆಗುವುದಕ್ಕೂ ಮುನ್ನ ದಿನದ ಗುತ್ತಿಗೆ ಅವಧಿಗೆ ಗ್ರಾಚ್ಯುಟಿ ಪಾವತಿಸುವುದು ಕಡ್ಡಾಯ'

Last Updated : Jan 2, 2024, 10:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.