ETV Bharat / state

ಕಟ್ಟಾ ಜೊತೆ ಮನಸ್ತಾಪವಿಲ್ಲ, ಜಗಳವೂ ಆಡಿಲ್ಲ: ಆರ್​​.ಅಶೋಕ್​​​

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್ ಅವರನ್ನೇ ಕಣಕ್ಕಿಳಿಸುವುದು ಬಹುತೇಕ ನಿಶ್ಚಿತವಾಗಿದೆ. ಇಂದು ತೇಜಸ್ವಿನಿ ಅನಂತಕುಮಾರ್​ರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಆರ್.ಅಶೋಕ್ ಸ್ಪಷ್ಟಪಡಿಸಿದರು.

ಮಾಜಿ ಡಿಸಿಎಂ ಆರ್ ಅಶೋಕ್
author img

By

Published : Mar 11, 2019, 5:46 PM IST

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರ ಸಂಬಂಧ ತಮ್ಮ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಡುವೆ ಯಾವುದೇ ಮನಸ್ತಾಪವಾಗಿಲ್ಲ, ಜಗಳವೂ ಆಗಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದು, ಮಾತುಕತೆ ಮೂಲಕ ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಮಾಜಿ ಡಿಸಿಎಂ ಆರ್ ಅಶೋಕ್

ಎಸ್.ಎಂ.ಕೃಷ್ಣ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ತಮ್ಮನ್ನು ಚುನಾವಣಾ ಉಸ್ತುವಾರಿಯಾಗಿ ನೇಮಕ‌ ಮಾಡಿರುವ ಕಾರಣ ನಿನ್ನೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಭೆ ಕರೆಯಲಾಗಿತ್ತು. ಮಾಜಿ ಕಾರ್ಪೊರೇಟರ್ ಶರವಣ ಸೇರಿದಂತೆ ಹಲವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಚರ್ಚೆ ನಡೆದಿದ್ದು ನಿಜ. ಬೆಂಗಳೂರು ಕೇಂದ್ರ ಸೇರಿದಂತೆ ಎಲ್ಲ 28 ಲೋಕಸಭಾ ಕ್ಷೇತ್ರದಲ್ಲಿ ಇರುವ ಇಂತಹ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಬಿಜೆಪಿ ಹೈಕಮಾಂಡ್ ನನಗೆ ಅಧಿಕಾರ ನೀಡಿದೆ. ಈ ಸಂಬಂಧ ಸಂಸದ ಪಿ.ಸಿ.ಮೋಹನ್ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರೊಂದಿಗೆ ಮತ್ತೊಂದು ಸಭೆ ನಡೆಸಿ, ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಾಗುತ್ತದೆ ಎಂದರು.

ಬೀದರ್ ಕ್ಷೇತ್ರದಲ್ಲೂ ಇಂತಹುದ್ದೇ ಸಮಸ್ಯೆ ಎದುರಾಗಿದೆ. ಒಂದೆರಡು ದಿನಗಳಲ್ಲಿ ಬೀದರ್​ಗೆ ಭೇಟಿ ಕೊಟ್ಟು ಅಲ್ಲಿಯೂ ಸಹ ಪರಾಜಿತ ಅಭ್ಯರ್ಥಿಗಳು ಮತ್ತು ಶಾಸಕರ ಸಭೆ ಕರೆದು ಸಮಸ್ಯೆ ಬಗೆಹರಿಸುತ್ತೇವೆ‌ ಎಂದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್ ಅವರನ್ನೇ ಕಣಕ್ಕಿಳಿಸುವುದು ಬಹುತೇಕ ನಿಶ್ಚಿತವಾಗಿದೆ. ಇಂದು ತೇಜಸ್ವಿನಿ ಅನಂತಕುಮಾರ್​ರೊಂದಿಗೆ ಚರ್ಚೆ ನಡೆಸಲಾಗುತ್ತದೆ. ಸಂಜೆ ಬೆಂಗಳೂರು ದಕ್ಷಿಣ ಲೊಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲ ಬಿಜೆಪಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ತೇಜಸ್ವಿನಿ ಅನಂತಕುಮಾರ್ ಅವರೇ ಬಿಜೆಪಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದರು.

ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಕ್ಷೇತ್ರಗಳಲ್ಲಿ ಬಂದು ಚುನಾವಣಾ ಪ್ರಚಾರ ನಡೆಸಿ ಪಕ್ಷದ ಗೆಲುವಿಗೆ ಸಹಕಾರವಾಗಲಿದೆ ಎಂದು ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಮನವಿ ಮಾಡಿದ್ದೇನೆ. ಅವರೂ ಬರುವ ಆಶ್ವಾಸನೆ ನೀಡಿದ್ದಾರೆ. ಮಂಡ್ಯ ಸೇರಿ ಹಲವು ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಅಶೋಕ್ ಮಾಹಿತಿ ನೀಡಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.