ETV Bharat / state

ಚುನಾವಣಾ ಫಲಿತಾಂಶ ಬಿಜೆಪಿಗೆ ಸಂತಸ ತಂದಿದೆ: ಪ್ರತಿಪಕ್ಷ ನಾಯಕ ಆರ್​​​ ಅಶೋಕ್

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

R Ashok reacts on election result
ಪ್ರತಿಪಕ್ಷ ನಾಯಕ ಆರ್. ಅಶೋಕ್
author img

By ETV Bharat Karnataka Team

Published : Dec 3, 2023, 11:25 AM IST

Updated : Dec 3, 2023, 12:37 PM IST

ಪ್ರತಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಇದೀಗ ಬರುತ್ತಿರುವ ಚುನಾವಣಾ ಫಲಿತಾಂಶ ಬಿಜೆಪಿಗೆ ಸಂತಸ ತಂದಿದೆ. ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿ ಸ್ವೀಪ್ ಆಗಲಿದೆ. ತೆಲಂಗಾಣದಲ್ಲೂ ಬಿಜೆಪಿಗೆ ಮುನ್ನಡೆ ಸಾಧಿಸುತ್ತಿದೆ. ಎಲ್ಲ ಕಡೆಗಳಲ್ಲೂ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಂಡಿದೆ. ಪ್ರಧಾನಿ ಮೋದಿ ಅವರ ಪ್ರಭಾವ ಎಲ್ಲ ಕಡೆಗಳಲ್ಲಿಯೂ ಕಾಣಿಸುತ್ತಿದೆ. ಛತ್ತೀಸ್​ಗಢದಲ್ಲೂ ಬಿಜೆಪಿ ಗೆಲ್ಲುವ ಪ್ರಯತ್ನ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಜಾಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಈ‌ ನಾಲ್ಕು ರಾಜ್ಯಗಳಲ್ಲೂ ಬಿಜೆಪಿಗೆ ಸೋಲಾಗಿತ್ತು. ಇದೀಗ ಎರಡು ಕಡೆ ಬಿಜೆಪಿಗೆ ಗೆಲುವು ಸಿಗಲಿರುವುದು ಬಹುತೇಕ ಪಕ್ಕಾ. ತೆಲಂಗಾಣದಲ್ಲಿ ಪೈಪೋಟಿ ನಡೆಸುತ್ತಿರುವುದು ಬಿಜೆಪಿಯ ದೊಡ್ಡ ಸಾಧನೆ. ಛತ್ತೀಸ್​​ಗಢದಲ್ಲಿ ನಮ್ಮ ಪಕ್ಷ ಮುನ್ನಡೆಯಲ್ಲಿದೆ. ಮೋದಿ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ಗ್ಯಾರಂಟಿಗಳು ಯಾವುದೇ ಪರಿಣಾಮ ಬೀರಿಲ್ಲ. ಉತ್ತರದ ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿದರೆ ಇದು ಗೊತ್ತಾಗುತ್ತಿದೆ. ಗ್ಯಾರಂಟಿಗಳು ಠುಸ್ ಪಟಾಕಿ ಆಗಿವೆ. ತೆಲಂಗಾಣದಲ್ಲಿ ಬಿಆರ್‌ಎಸ್ ಕುಟುಂಬ ರಾಜಕೀಯ ಮಾಡಿದೆ. ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣ ಕಳೆದುಕೊಂಡಿದೆ ಎಂದು ಪ್ರತಿಪಕ್ಷದ ನಾಯಕ ಆರ್​ ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ ಫಲಿತಾಂಶ: ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ... ಭಾರಿ ಬಹುಮತದತ್ತ ದಾಪುಗಾಲು!

ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನ ಇಟ್ಟುಕೊಂಡು ಕಾಂಗ್ರೆಸ್​ನವರು ರೆಸಾರ್ಟ್ ರಾಜಕಾರಣ ಮಾಡಲು ಹೊರಟಿದ್ದಾರೆ. ದೊಡ್ಡ ಶೋ ಕೊಡಲು ಡಿ.ಕೆ ಶಿವಕುಮಾರ್ ತೆಲಂಗಾಣಕ್ಕೆ ಹೋಗಿದ್ದಾರೆ. ಜನರ ಕಷ್ಟ ಮರೆತು ತೆಲಂಗಾಣ ಶಾಸಕರಿಗಾಗಿ ಡಿಸಿಎಂ ಹೋಗಿರುವುದು ನಾಚಿಕೆಗೇಡಿನ ವಿಷಯ ಎಂದು ಆರ್​ ಅಶೋಕ್​ ವಾಗ್ದಾಳಿ ನಡೆಸಿದರು.

ತೆಲಂಗಾಣ ಕಾಂಗ್ರೆಸ್​ನವರಿಗೆ ಧಮ್ ಇಲ್ಲ. ಬರಗಾಲ ಬಂದಾಗ ಸಿದ್ದರಾಮಯ್ಯನವರು ಕಣ್ಣೀರು ಸುರಿಸಿದ್ದೇ ಬಂತು. ಅವರದ್ದು ಬರೀ ಮೊಸಳೆ ಕಣ್ಣೀರು. ಅಧಿವೇಶನ ಇದೆ. ಆದರೆ, ಇವರು ತೆಲಂಗಾಣದ ಸೇವೆ ಮಾಡ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ.‌ ತೆಲಂಗಾಣ ಶಾಸಕರನ್ನು ಇಲ್ಲಿಗೆ ಕರೆದುಕೊಂಡು ಬರಲಿ. ಅಧಿವೇಶನದಲ್ಲಿ ಬರದ ಬಗ್ಗೆ ಮಾತಾಡೋದನ್ನು ಬಿಟ್ಟು, ರೆಸಾರ್ಟ್​​ನಲ್ಲಿ ಶಾಸಕರ ಸೇವೆಯನ್ನು ಮಂತ್ರಿಗಳು ಮಾಡಲು ಹೊರಟಿದ್ದಾರೆ. ಅದರ ಪರಿಣಾಮ ಸರಿ ಇರುವುದಿಲ್ಲ. ಅವರಿಗೆ ಹೋರಾಟ, ಪ್ರತಿಭಟನೆಗಳ ಮೂಲಕ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾನು ಟ್ರೆಂಡ್ ನೋಡಿಲ್ಲ, ಮಧ್ಯಪ್ರದೇಶ ಮತದಾರರ ಮೇಲೆ ನಂಬಿಕೆ ಇದೆ: ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್

Last Updated : Dec 3, 2023, 12:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.